ಭೋಪಾಲ್ : ಆರೋಪಿಗಳಾಗಿದ್ದ ಪತ್ರಕರ್ತ, ಯೂಟ್ಯೂಬರ್ ಸೇರಿದಂತೆ ಪುರುಷರ ಗುಂಪನ್ನು ಪೊಲೀಸ್ ಠಾಣೆಯೊಳಗೆ ಕೇವಲ ಒಳ ಉಡುಪಿನಲ್ಲಿ ನಿಲ್ಲಿಸಿದ್ದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಪತ್ರಕರ್ತ ಮತ್ತು ಯೂಟ್ಯೂಬರ್ ಸೇರಿದಂತೆ ಪುರುಷರ ಗುಂಪನ್ನು ಪೊಲೀಸ್ ಠಾಣೆಯೊಳಗೆ ಒಳ ಉಡುಪಿನಲ್ಲಿ ನಿಲ್ಲಿಸಿದ್ದ ಫೋಟೋ ವೈರಲ್ ಆಗುತ್ತಿದ್ದಂತೆಯೇ ಈ ಬಗ್ಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯ ಪ್ರಭಾರಿ ಕೊತ್ವಾಲಿ ಸಿಧಿ ಮತ್ತು ಸಬ್ ಇನ್ಸ್‌ಪೆಕ್ಟರ್ ಅವರನ್ನು ಅಮಾನತುಗೊಳಿಸಿ ಕ್ರಮ ಕೈಗೊಂಡಿದ್ದಾರೆ.
ಈ ಬಗ್ಗೆ ಪೊಲೀಸರೊಬ್ಬರು ‘ತಮ್ಮ ಬಟ್ಟೆಗಳನ್ನು ಬಳಸಿ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ನಾವು ಅವರನ್ನು ಈ ರೀತಿ ಜೈಲಿನಲ್ಲಿ ಇರಿಸಿದ್ದೇವೆ’ ಎಂದು ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ವಿರೋಧಿ ವಿಚಾರವನ್ನು ಪೋಸ್ಟ್ ಮಾಡಿದ ಆರೋಪದಲ್ಲಿ ಯೂಟ್ಯೂಬರ್ ಬಂಧನವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಪತ್ರಕರ್ತ ಸೇರಿದಂತೆ 8 ಮಂದಿಯನ್ನು ವಶಕ್ಕೆಪಡೆದ ಪೊಲೀಸರು ವಿವಸ್ತ್ರಗೊಳಿಸಿದ್ದರು. ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿ ಹಲವರು ಆಕ್ರೋಶ ಹೊರ ಹಾಕಿದ್ದಾರೆ.
Comments are closed.