ಉಡುಪಿ: ಸಚಿವ ಕೆ.ಎಸ್ ಈಶ್ವರಪ್ಪ ತನ್ನ ಸಾವಿಗೆ ಕಾರಣ ಎಂದು ಡೆತ್ ನೋಟ್ ಬರೆದು ಸಂತೋಷ್ ಪಾಟೀಲ್ ಉಡುಪಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸಮೀಪದ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ತಾವು ಮಾಡಿದ 108 ಕಾಮಗಾರಿ ಬಿಲ್ ಪಾವತಿಗೆ ಸಚಿವ ಈಶ್ವರಪ್ಪ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆಂದು ಆರೋಪಿಸಿ ಗುತ್ತಿಗೆದಾರ ಸಂತೋಷ ಪಾಟೀಲ್ ಕೆಲವು ಮಾಧ್ಯಮ ಪ್ರತಿನಿಧಿಗಳ ಮೊಬೈಲ್‌ಗೆ ‘ನನ್ನ ಸಾವಿಗೆ ಕೆ.ಎಸ್.ಈಶ್ವರಪ್ಪ ಕಾರಣ’ ಎಂದು ಡೆತ್‌ನೋಟ್ ವಾಟ್ಸಪ್ ಮೆಸೇಜ್ ಕಳಿಸಿ ನಾಪತ್ತೆಯಾಗಿದ್ದರು.
ಇನ್ನು ಡೆತ್‌ನೋಟ್ ಮೆಸೇಜ್ ಮಾಹಿತಿ ಬೆನ್ನಲ್ಲೇ ಸಂತೋಷ ಪಾಟೀಲ್ ಪತ್ತೆಗಾಗಿ ಪೊಲೀಸರು ಮುಂದಾಗಿದ್ದಾಗ ಸಂತೋಷ ಮೊಬೈಲ್ ನೆಟ್ವರ್ಕ್ ಲೋಕೇಷನ್ ಉಡುಪಿಯಲ್ಲಿ ಆ್ಯಕ್ಟೀವ್ ಆದ ಬಗ್ಗೆ ಮಾಹಿತಿ ಲಭಿಸಿತ್ತು.
ಬೆಳಗಾವಿಯ ಸಂತೋಷ ಪಾಟೀಲ್ ನಿವಾಸದಿಂದ ವಾರದ ಹಿಂದೆ ತೆರಳಿದ್ದ ಸಂತೋಷ್ ಇದೀಗ ಉಡುಪಿಯ ಲಾಡ್ಜಿಂಗ್ ಒಂದರಲ್ಲಿ ವುಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉಡುಪಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Comments are closed.