ಉಡುಪಿ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಏಪ್ರಿಲ್ 15 ರಂದು ಗಂಗೊಳ್ಳಿಯಲ್ಲಿ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ಭಾಗಿಯಾಗದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿದ್ದು ಅವರು ಅಂದು ಉಡುಪಿ ಜಿಲ್ಲೆಗೆ ಆಗಮಿಸಲು ನಿರ್ಬಂಧ ವಿಧಿಸಿ ಡಿಸಿ ಕೂರ್ಮಾ ರಾವ್ ಎಂ ಆದೇಶ ಮಾಡಿದ್ದಾರೆ.
ಏಪ್ರಿಲ್ 15 ರಂದು ಗಂಗೊಳ್ಳಿಯ ವೀರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಪ್ರಮೋದ್ ಮುತಾಲಿಕ್ ಅವರು ಭಾಗಿಯಾಗುವ ಕಾರ್ಯಕ್ರಮ ನಿಗದಿಯಾಗಿತ್ತು.
ಕಳೆದ ಕೆಲವು ವರ್ಷಗಳಿಂದ ಕೋಮು ಸೂಕ್ಷ್ಮ ಪ್ರದೇಶವಾಗಿರುವ ಗಂಗೊಳ್ಳಿಯಲ್ಲಿ ಮುತಾಲಿಕ್ ಅವರು ಪ್ರಚೋದನಕಾರಿ ಭಾಷಣ ಮಾಡಿದರೆ ಶಾಂತಿ ಭಂಗ ಉಂಟಾಗುವ ಸಾಧ್ಯತೆಗಳಿವೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮನವಿ ಸಲ್ಲಿಸಿದ್ದು ಇದನ್ನು ಮನಗಂಡು ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಮುತಾಲಿಕ್ ಅವರು ಏ.15 ಕ್ಕೆ ಉಡುಪಿ ಜಿಲ್ಲಾದ್ಯಂತ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾರೆ.
Comments are closed.