ಉಡುಪಿ: ಉಡುಪಿ ಜಿಲ್ಲಾ ಪ್ರವೇಶಕ್ಕೆ ಏ.15ಕ್ಕೆ ನಿರ್ಬಂಧವಿರುವ ಹಿನ್ನೆಲೆ ಏ.14 ಗುರುವಾರವೇ ಜಿಲ್ಲೆಗೆ ಆಗಮಿಸಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಚಿಕಿತ್ಸೆ ಪಡೆಯಲು ಉಡುಪಿ ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿದೆ.
ಚಿಕಿತ್ಸೆ ಪಡೆಯಲು ಮಾತ್ರ ಅವಕಾಶ ಕಲ್ಪಿಸಿ ಜಿಲ್ಲಾಡಳಿತ ಪರಿಷ್ಕೃತ ಆದೇಶ ಹೊರಡಿಸಿದೆ. ಮೊನ್ನೆ ಬುಧವಾರವಷ್ಟೇ ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿಮುತಾಲಿಕ್ ಆಗಮನಕ್ಕೆ ಉಡುಪಿ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ನಿನ್ನೆಯೇ ಉಡುಪಿ ಜಿಲ್ಲೆಗೆ ಆಗಮಿಸಿದ್ದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬಳಿಕ ಉಡುಪಿಯಲ್ಲಿ ವಾಸ್ತವ್ಯ ಮಾಡಿ ಆಸ್ಪತ್ರೆಗೆ ದಾಖಲಾದ ಬಗ್ಗೆ ಮಾಹಿತಿಯಿದೆ. ಅವರು ಕುಂದಾಪುರ ಉಪವಿಭಾಗ ಪ್ರವೇಶ ಮಾಡಬಾರದು ಹಾಗೂ ಯಾವುದೇ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಇನ್ನು ಗಂಗೊಳ್ಳಿಯ ವೀರೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಬೆಳಿಗ್ಗೆ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆದಿದ್ದು ಇನ್ನು ಕೆಲವೇ ಕ್ಷಣದಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಹಂಗಾರಕಟ್ಟೆ ಬಾಳೆಕುದ್ರು ಶ್ರೀಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ ಉಪಸ್ಥಿತಿ ಖಚಿತವಾಗಿದೆ.
ಗಂಗೊಳ್ಳಿಯಲ್ಲಿ ಆಯಕಟ್ಟಿನ ಸ್ಥಳದಲ್ಲಿ ಪೊಲೀಸ್ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ.
Comments are closed.