ಉಡುಪಿ: ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಮಧ್ಯರಾತ್ರಿ ವೇಳೆ ಬೆಂಕಿ ಅನಾಹುತ ಸಂಭವಿಸಿದ್ದು ಇದರಿಂದ ಲಕ್ಷಾಂತರ ರೂ ನಷ್ಟ ಸಂಭವಿಸಿರುವ ಬಗ್ಗೆ ಅಂದಾಜಿಸಲಾಗಿದೆ.
ವೆಸ್ಟೆಕ್ ಎಂಟರ್ ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಇಂಕ್ ಪ್ಲಾಂಟ್ ನಲ್ಲಿ ರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತೆನ್ನಲಾಗಿದೆ. ಈ ಬೆಂಕಿಯ ಕೆನ್ನಾಲಿಗೆ ಇಡೀ ಫ್ಯಾಕ್ಟರಿಗೆ ವಿಸ್ತರಿಸಿತು. ಇದರಿಂದ ಅಪಾರ ಸೊತ್ತುಗಳು ಬೆಂಕಿಗೆ ಆಹುತಿ ಆಗಿದೆ ಇದರಿಂದ ಇಡೀ ಪರಿಸರ ಹೊಗೆಯಿಂದ ಆವರಿಸಿಕೊಂಡಿತ್ತು.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟರು ನಸುಕಿನ ವೇಳೆ ಬೆಂಕಿ ನಂದಿಸುವಲ್ಲಿ ಸಿಬ್ಬಂದಿಗಳು ಯಶಸ್ವಿಯಾದರು.
Comments are closed.