ಉಡುಪಿ: ಉಡುಪಿ ಜಿಲ್ಲೆಯ ಮಲ್ಪೆ ಬೀಚಿನ ಸೈಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಇಬ್ಬರು ವಿದ್ಯಾರ್ಥಿಗಳು ಸೆಲ್ಫಿ ತೆಗೆಯಲು ಹೋಗಿ ನೀರು ಪಾಲಾದ ಘಟನೆ ಸೋಮವಾರ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು ಬೆಂಗಳೂರಿನ ಜಿಕೆವಿಕೆ ಕೃಷಿ ಕಾಲೇಜಿನ ಬಾಗಲಕೋಟೆ ಮೂಲದ ಸತೀಶ್ ಎಸ್ ಕಲ್ಯಾಣ್ ಶೆಟ್ಟಿ (21) ಮತ್ತು ಹಾವೇರಿಯ ಸತೀಶ್ ಎಂ. ನಂದಿಹಳ್ಳಿ (21) ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಜಿಕೆವಿಕೆ ಕೃಷಿ ಕಾಲೇಜಿನ ಸುಮಾರು 68 ವಿದ್ಯಾರ್ಥಿಗಳು ಮಲ್ಪೆ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಬಂದಿದ್ದು, ಲೈಫ್ ಗಾರ್ಡ್ ಗಳ ಸೂಚನೆಯನ್ನು ಧಿಕ್ಕರಿಸಿ ಸೆಲ್ಫಿ ತೆಗೆಯಲು ತೆರಳಿದ್ದು ಅಲೆಯ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಸದ್ಯ ಒಬ್ಬ ವಿದ್ಯಾರ್ಥಿಯ ಶವ ಪತ್ತೆಯಾಗಿದ್ದು ಇನ್ನೋರ್ವ ವಿದ್ಯಾರ್ಥಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಈ ಬಗ್ಗೆ ಮಲ್ಪೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.