ಕರಾವಳಿ

ಕುಂದಾಪುರ, ಬೈಂದೂರಿನ 21 ವಿದ್ಯಾರ್ಥಿನಿಯರು ಮೊದಲ ದಿನದ ದ್ವಿತೀಯ ಪಿ.ಯು.ಸಿ ಪರೀಕ್ಷೆಗೆ ಗೈರು

Pinterest LinkedIn Tumblr

ಕುಂದಾಪುರ : ಬೈಂದೂರು ಹಾಗೂ ಕುಂದಾಪುರ ತಾಲ್ಲೂಕಿನಲ್ಲಿ ಶುಕ್ರವಾರ ನಡೆದ ಪಿ.ಯು ವಾರ್ಷಿಕ ಪರೀಕ್ಷೆಗೆ 21 ವಿದ್ಯಾರ್ಥಿನಿಯರು ಗೈರಾಗಿದ್ದಾರೆ.

ಬೈಂದೂರು ಪರೀಕ್ಷಾ ಕೇಂದ್ರದಲ್ಲಿ ಓರ್ವ ವಿದ್ಯಾರ್ಥಿನಿ, ನಾವುಂದ ಪರೀಕ್ಷಾ ಕೇಂದ್ರದಲ್ಲಿ ಇಬ್ಬರು, ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ 5 , ಕುಂದಾಪುರದ ಆರ್.ಎನ್.ಶೆಟ್ಟಿ ಪಿ.ಯು ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ 9 ವಿದ್ಯಾರ್ಥಿನಿಯರು ಹಾಗೂ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ 4 ವಿದ್ಯಾರ್ಥಿನಿಯರು ಮೊದಲ ದಿನದ ಪರೀಕ್ಷೆಗೆ ಗೈರಾಗಿದ್ದಾರೆ ಎಂದು ತಿಳಿದುಬಂದಿದೆ.

Comments are closed.