ಪ್ರಮುಖ ವರದಿಗಳು

ತಮಿಳುನಾಡಿನಲ್ಲಿ‌ ವಿದ್ಯುತ್ ಅವಘಡದಲ್ಲಿ ಮೃತರಾದ 11‌ಮಂದಿ‌ ಕುಟುಂಬಕ್ಕೆ 2 ಲಕ್ಷ ಘೋಷಿಸಿದ ಪ್ರಧಾನಿ ಮೋದಿ

Pinterest LinkedIn Tumblr

ನವದೆಹಲಿ: ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಬುಧವಾರ ದೇವಸ್ಥಾನದ ರಥೋತ್ಸವದ ವೇಳೆ ಹೈ ಟೆನ್ಷನ್ ಟ್ರಾನ್ಸ್‌ಮಿಷನ್ ಲೈನ್ ಸಂಪರ್ಕಕ್ಕೆ ಬಂದಾಗ ಇಬ್ಬರು ಮಕ್ಕಳು ಸೇರಿದಂತೆ 11 ಜನರು ವಿದ್ಯುತ್ ಸ್ಪರ್ಶಿಸಿ ಸಾವನಪ್ಪಿದ್ದು ಪ್ರಧಾನಿ ನರೇಂದ್ರ ಮೋದಿಯವರು ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ತಮಿಳುನಾಡಿನ ತಂಜಾವೂರಿನಲ್ಲಿ ದುರ್ಘಟನೆಯಿಂದ ಪ್ರಾಣ ಕಳೆದುಕೊಂಡವರ ಸಂಬಂಧಿಸಿದವರಿಗೆ ತಲಾ 2 ಲಕ್ಷ ನೀಡಲಾಗುವುದು. ಗಾಯಾಳುಗಳಿಗೆ ರೂ. 50,000 ನೀಡಲಾಗುವುದು ಎಂದು ತಿಳಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಕೂಡ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಇನ್ನು ಘಟನೆಯಲ್ಲಿ ಸುಮಾರು 15 ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ತಿರುಚಿರಾಪಳ್ಳಿಯ ಕೇಂದ್ರ ವಲಯದ ಪೊಲೀಸ್ ಮಹಾನಿರೀಕ್ಷಕ ವಿ ಬಾಲಕೃಷ್ಣನ್ ತಿಳಿಸಿದ್ದಾರೆ.

Comments are closed.