ಮಂಗಳೂರು: ತೊಕ್ಕೊಟ್ಟಿನ ಹುದಾ ಜುಮ್ಮಾ ಮಸೀದಿಯಲ್ಲಿ ಮಹಿಳೆಯರು ನಮಾಜ್ ಮಾಡುವ ಕೊಠಡಿಗೆ ನುಗ್ಗಿ ಮಹಿಳೆಯರ ಕೈಹಿಡಿದು ಎಳೆದು, ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿರುವ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿ ಸುಜಿತ್ ಶೆಟ್ಟಿ(26) ಎಂದು ಗುರುತಿಸಲಾಗಿದೆ.
ತೊಕ್ಕೊಟ್ಟಿನ ಹುದಾ ಜುಮ್ಮಾ ಮಸೀದಿಯಲ್ಲಿ ಲೈಲಾತುಲ ಖದರ್ ನ ರಾತ್ರಿ ವಿಶೇಷ ಕಾರ್ಯಕ್ರಮವನ್ನು ಕಳೆದ 28 ರಂದು ಏರ್ಪಡಿಸಲಾಗಿದ್ದು, ಈ ವೇಳೆ ಆರೋಪಿ ಸುಜಿತ್ ಶೆಟ್ಟಿ ಮಸೀದಿಯಲ್ಲಿ ಮಹಿಳೆಯರು ನಮಾಜ್ ಮಾಡುವ ಕೊಠಡಿಗೆ ನುಗ್ಗಿ ಮಹಿಳೆಯರ ಕೈಹಿಡಿದು ಎಳೆದು, ಅಶ್ಲೀಲವಾಗಿ ವರ್ತಿಸಿದ್ದಲ್ಲದೇ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿ ಮಾನಹಾನಿ ಮಾಡಿದ್ದಾನೆ ಎಂದು ದೂರು ದಾಖಲಾಗಿದೆ.
ಈ ಬಗ್ಗೆ ಮಹಿಳೆ ನೀಡಿದ ದೂರಿನ ಮೇರೆಗೆ ಉಳ್ಳಾಲ ಪೋಲಿಸ್ ಠಾಣೆಯಲ್ಲಿ ಸೆಕ್ಷನ್ 354 ರಂತೆ ಪ್ರಕರಣ ದಾಖಲಾಗಿದೆ.
Comments are closed.