ಕರಾವಳಿ

ಮಂಗಳೂರು ಕೊಟ್ಟಾರಚೌಕಿಯಲ್ಲಿ ಹಾಸ್ಟೆಲ್‌ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ದಾರುಣ ಮೃತ್ಯು

Pinterest LinkedIn Tumblr

ಮಂಗಳೂರು: ಹಾಸ್ಟೆಲ್‌ ಕಟ್ಟಡವೊಂದರ ನಾಲ್ಕನೇ ಮಹಡಿಯಿಂದ ವಿದ್ಯಾರ್ಥಿಯೊಬ್ಬ ಬಿದ್ದು ಮೃತಪಟ್ಟ ಘಟನೆ ಕಾವೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಎಂಬಲ್ಲಿ ಬುಧವಾರ ನಡೆದಿದೆ.ಮೃತ ವಿದ್ಯಾರ್ಥಿಯನ್ನು ವಿಜಯಪುರ ನಿವಾಸಿ ಪ್ರಣವ್‌ ಎಸ್‌. (17) ಎಂದು ಗುರುತಿಸಲಾಗಿದೆ.

ಮೃತ ಪ್ರಣವ್‌ ಕೊಟ್ಟಾರ ಚೌಕಿ ಬಳಿಕ ಖಾಸಗಿ ಕಾಲೇಜಿನಲ್ಲಿ ದ್ವೀತಿಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದು ಹಾಸ್ಟೆಲ್‌ ನಲ್ಲಿ ವಾಸವಿದ್ದ.

ಬುಧವಾರ ವಿದ್ಯಾರ್ಥಿಗಳು ಕ್ರಿಕೆಟ್‌ ಆಡುತ್ತಿದ್ದು ಈ ವೇಳೆ ಬಾಲ್‌ ಹಾಸ್ಟೇಲ್‌ ಕಟ್ಟಡದ ಮೇಲೆ ಬಿದ್ದಿದ್ದು, ಕಟ್ಟಡದ ಮಹಡಿಯಲ್ಲಿದ್ದ ಪ್ರಣವ್‌ ಅದನ್ನು ಹೆಕ್ಕುವ ಸಲುವಾಗಿ ಮಹಡಿಗೆ ಅಳವಡಿಸಿದ ಶೀಟ್‌ ಗೆ ಏರಿದ್ದ ವೇಳೆ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 

Comments are closed.