ಉಡುಪಿ: ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಲ್ಲದೆ ಜಿಲ್ಲಾ ಉಪಾಧ್ಯಕ್ಷರಾಗಿದ್ದ ಮುನಿಯಾಲು ಉದಯ ಕುಮಾರ್ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಪ್ರಭಾವಿ ಮುಖಂಡರಾಗಿರುವ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಮುಂದಿನ ನಡೆ ಏನು ಎಂಬುದು ಅವರ ಬೆಂಬಲಿಗರಲ್ಲಿ ಕುತೂಹಲ ಮೂಡಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮುಂದಿನ ನಡೆಯ ಬಗ್ಗೆ ಇನ್ನೂ ತೀರ್ಮಾನಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
Comments are closed.