ಬೆಂಗಳೂರು: ಹದಿನೇಳು ಐಎಎಸ್ ಅಧಿಕಾರಿಗಳನ್ನು ಸರಕಾರ ವರ್ಗಾವಣೆ ಮಾಡಿದ್ದು, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರನ್ನು ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ತುಷಾರ್ ಗಿರಿನಾಥ್ ಅವರನ್ನು ನೇಮಿಸಿದೆ.
ಗೌರವ್ ಗುಪ್ತಾ ಅವರನ್ನು ಮೂಲಸೌಕರ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಬಿಬಿಎಂಪಿಯಲ್ಲೂ ಶೇ.40 ಪರ್ಸೆಂಟ್ ಕಮೀಷನ್ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮುಖ್ಯ ಆಯುಕ್ತರ ವರ್ಗಾವಣೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ಕುಮಾರ್ ಅವರಿಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಮುಖ್ಯಮಂತ್ರಿಗಳ ಕಾರ್ಯದರ್ಶಿ ವಿ. ಪೊನ್ನುರಾಜ್ ಅವರನ್ನು ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ ಕಾರ್ಯದರ್ಶಿ ಹುದ್ದೆ ಜೊತೆಗೆ ಹೆಚ್ಚುವರಿಯಾಗಿ ಕೆಪಿಸಿಎಲ್ ವ್ಯವಸ್ಥಾಪಕ ಹುದ್ದೆ ನೀಡಲಾಗಿದೆ.
ಹುದ್ದೆ ನಿರೀಕ್ಷೆಯಲ್ಲಿದ್ದ ಮನೋಜ್ ಜೈನ್. ಖುಷೂಜಿ ಚೌಧರಿ, ಭರತ್ ಎಸ್. ಹಾಗೂ ಶಿಲ್ಪ ಎಂ. ಅವರಿಗೆ ಕ್ರಮವಾಗಿ ಕಾರ್ಮಿಕ ಇಲಾಖೆ ಕಾರ್ಯದರ್ಶಿ, ದೆಹಲಿಯ ಕರ್ನಾಟಕ ಭವನದ ಉಪ ಆಯುಕ್ತರಾಗಿ, ಈಶಾನ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಹಾಗೂ ಕರ್ನಾಟಕ ನಗರಾಭಿವೃದ್ಧಿ ಮತ್ತು ಆರ್ಥಿಕ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ನೇಮಿಸಲಾಗಿದೆ.
ಕೆ.ಪಿ.ಎಸ್.ಸಿಬ ಕಾರ್ಯದರ್ಶಿಯಾಗಿ ಕ್ಯಾ.ಡಾ.ಕೆ.ರಾಜೇಂದ್ರ, ಕೆಆರ್‌ಐಡಿಎಲ್ ಎಂ.ಡಿ. ಯಾಗಿ ಎಂ.ಜಿ. ಹಿರೇಮಠ., ಬೆಳಗಾವಿ ಜಿಲ್ಲಾಧಿಕಾರಿಯಾಗಿ ನಿತೇಶ್ ಪಾಟೀಲ್, ಧಾರವಾಡ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ, ಕೆಎಸ್‌ಆರ್‌ಟಿಸಿ ನಿರ್ದೇಶಕರಾಗಿ ಡಾ. ನವೀನ್ ಭಟ್ ವೈ., ಬಾಗಲಕೋಟೆ ಜಿಪಂ ಸಿಇಒ ಭೂಬಲನ್ ಟಿ. ಅವರಿಗೆ ಹೆಚ್ಚುವರಿಯಾಗಿ ಬಾಗಲಕೋಟೆ ಜಿಲ್ಲಾಧಿಕಾರಿ ಹುದ್ದೆ ನೀಡಲಾಗಿದೆ.
ಡಿಪಿಎಆರ್ ಇಡಿಸಿಎಸ್ ವಿಭಾಗದ ನಿರ್ದೇಶಕರಾಗಿ ಡಾ. ದಿಲೀಸ್ ಸಸಿ. ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಪ್ರಸನ್ನ ಎಚ್., ಕಲಬುರಗಿ ಜಿಪಂ ಸಿಇಒ ಆಗಿ ಡಾ. ಗಿರೀಶ್ ದಿಲೀಪ್ ಬಡೋಲೆ ಅವರನ್ನು ವರ್ಗಾವಣೆ ಮಾಡಲಾಗಿದೆ.
Comments are closed.