ಕರ್ನಾಟಕ

ಸ್ಯಾಂಡಲ್‍ವುಡ್‍ನ ಖ್ಯಾತ ಹಾಸ್ಯ ನಟ ಮೋಹನ್ ಜುನೇಜಾ ಇನ್ನಿಲ್ಲ

Pinterest LinkedIn Tumblr

ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಜನಪ್ರಿಯ ಹಾಸ್ಯ ನಟ ಮೋಹನ್ ಜುನೇಜಾ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮೋಹನ್ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೋಹನ್‌ ಜುನೇಜಾ ಅವರು ಕೆಜಿಎಫ್ ಚಾಪ್ಟರ್ 1 ಮತ್ತು ಚಾಪ್ಟರ್ 2 ರಲ್ಲಿ ಅಭಿನಯಿಸಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿ ಇತ್ತೀಚಿಗೆ ಕಾಣಿಸಿಕೊಂಡಿದ್ದರು.

ಮೃತ ಜುನೇಜ ಅವರು ತಾಯಿ, ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಅನೇಕ ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು.

Comments are closed.