ಕರಾವಳಿ

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ರಾಜೀನಾಮೆ..!

Pinterest LinkedIn Tumblr

ಉಡುಪಿ: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ರಾಜೀನಾಮೆ ನೀಡಿದ್ದು ಅವರು ಬಿಜೆಪಿ ಪಕ್ಷ ಸೇರಲಿದ್ದಾರೆಂಬ ವದಂತಿಗೆ ಇನ್ನಷ್ಟು ಪುಷ್ಟಿ ಸಿಕ್ಕಿದಂತಾಗಿದೆ.

ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ‌ ಕೂ ಹಿಡಿಯಲಿದ್ದಾರೆಂಬ ಮಾತುಗಳು ಕೆಲ ವರ್ಷಗಳಿಂದ ರಾಜಕೀಯ ವಲಯದಲ್ಲಿ ಕೇಳಿಬಂದಿತ್ತಾದರೂ ಇದನ್ನು ಪ್ರಮೋದ್ ಅಲ್ಲಗಳೆದಿದ್ದರು. ಮುಂದುವರಿದ ಬೆಳವಣಿಗೆಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಮೋದ್ ಮಧ್ವರಾಜ್ ಬಿಜೆಪಿಗೆ ಬರುವ ಮುನ್ಸೂಚನೆ ಬಗ್ಗೆ ಮಾಹಿತಿ ನೀಡಿದ್ದರು.

ಆದರೆ ಉಡುಪಿಯಲ್ಲಿ ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಪ್ರಮೋದ್ ಮಧ್ವರಾಜ್ ಯಾವುದೇ‌ ಪ್ರತಿಕ್ರಿಯೆ ನೀಡದೇ ಕಾದು‌ನೋಡಿ, ಮಾತನಾಡಲು ನಾನೇ ಪತ್ರಿಕಾಗೋಷ್ಟಿ ಮಾಡುತ್ತೇನೆ ಎಂದು‌ ಮಾರ್ಮಿಕವಾಗಿ ತಿಳಿಸಿದ್ದರು.

ಶನಿವಾರ ಅವರು ಅಧೀಕೃತವಾಗಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾಗಿ ತಿಳಿದುಬಂದಿದೆ.

Comments are closed.