ಉಡುಪಿ: ಉಡುಪಿಯ ಆತ್ರಾಡಿ ಮದಗದ ಬಳಿ ಇರುವ ಮನೆಯೊಂದರಲ್ಲಿ ತಾಯಿ ಮಗಳ ಶವ ಪತ್ತೆಯಾಗಿದ್ದು , ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಮೃತರನ್ನು ತಾಯಿ ಚೆಲುವಿ(30) ಮಗಳು ಪ್ರಿಯಾ (10) ಎಂದು ಗುರುತಿಸಲಾಗಿದೆ.
ಮನೆಯ ಕೋಣೆಯಲ್ಲಿ ತಾಯಿ – ಮಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು , ಮೃತದೇಹಗಳ ಬಾಯಿಯಲ್ಲಿ ರಕ್ತದ ಕಲೆ ಕಂಡುಬಂದಿರುವುದು ಸಂಶಯಕ್ಕೆ ಎಡೆಮಾಡಿದೆ.
ಮಣಿಪಾಲ ಖಾಸಗಿ ಸಂಸ್ಥೆಯಲ್ಲಿ ಹೌಸ್ಕೀಪಿಂಗ್ ಕೆಲಸ ಮಾಡುತ್ತಿದ್ದ ಚೆಲುವಿ ತನ್ನ ಮಗಳೊಂದಿಗೆ ವಾಸವಾಗಿದ್ದರು.
ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಮತ್ತು ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ ಭೇಟಿ ನೀಡಿದ್ದಾರೆ.
Comments are closed.