ಕರ್ನಾಟಕ

ಶಾಸಕ ಜಿ.ಟಿ.ದೇವೇಗೌಡರ 3 ವರ್ಷದ ಮೊಮ್ಮಗಳು ನಿಧನ

Pinterest LinkedIn Tumblr

ಮೈಸೂರು: ಶಾಸಕ ಜಿ.ಟಿ. ದೇವೇಗೌಡರ 3 ವರ್ಷದ ಮೊಮ್ಮಗಳು ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದ್ದು ಇಡೀ ಕುಟುಂಬ ದುಃಖಭರಿತವಾಗಿದೆ.

ಜಿ.ಟಿ. ದೇವೇಗೌಡರ ಪುತ್ರ ಜಿ.ಡಿ. ಹರೀಶ್ ಗೌಡ ಮಗಳು 3 ವರ್ಷದ ಗೌರಿ ಮೃತ ದುರ್ದೈವಿ.

ಅನಾರೋಗ್ಯದಿಂದ ಬಳಲುತ್ತಿದ್ದ ಗೌರಿಯನ್ನು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮಧ್ಯರಾತ್ರಿ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಜಿ.ಟಿ.ದೇವೇಗೌಡರ ಮೊಮ್ಮಗಳ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಾಜಿ ಮಂತ್ರಿಗಳಾದ ಶ್ರೀ ಜಿ.ಟಿ.ದೇವೇಗೌಡರ ಮೊಮ್ಮಗಳು, ಮೂರು ವರ್ಷದ ಹಸುಗೂಸು ಗೌರಿ ಅನಾರೋಗ್ಯದಿಂದ ಅಸುನೀಗಿರುವ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ಮುದ್ದು ಕಂದಳ ಅಗಲಿಕೆ ನನಗೆ ಬಹಳ ದುಃಖ ಉಂಟುಮಾಡಿದೆ ಎಂದು ಹೇಳಿದ್ದಾರೆ.

Comments are closed.