ಕುಂದಾಪುರ: ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್ ಯಾನೆ ಭೋಜಣ್ಣ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಉದ್ಯಮಿ ಮೊಳಹಳ್ಳಿ ಗಣೇಶ ಶೆಟ್ಟಿಯನ್ನು ಬಂಧಿಸಿದ್ದಾರೆ.
ಆತ್ಮಹತ್ಯೆ ವಿಚಾರದಲ್ಲಿ ಮೃತರ ಪುತ್ರ ಕಟ್ಟೆ ಸುಧೀಂದ್ರ ಅವರು ಕುಂದಾಪುರ ಪೊಲೀಸರಿಗೆ ದೂರು ನೀಡಿದ್ದು ತನ್ನ ತಂದೆಯ ಸಾವಿಗೆ ಮೊಳಹಳ್ಳಿ ಗಣೇಶ್ ಶೆಟ್ಟಿ ಮತ್ತು ಬ್ರೋಕರ್ ಇಸ್ಮಾಯಿಲ್ ಅವರ ಪ್ರಚೋದನೆ ಕಾರಣ ಎಂದು ದೂರು ನೀಡಿದ್ದರು.
ಅದರಂತೆ ಪೊಲೀಸರು ಗಣೇಶ್ ಶೆಟ್ಟಿಯವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪ್ರಕರಣದ ಇನ್ನೋರ್ವ ಆರೋಪಿ ಇಸ್ಮಾಯಿಲ್ ಬಂಧನಕ್ಕೆ ಪೋಲಿಸರು ಬಲೆ ಬೀಸಿದ್ದಾರೆ.
Comments are closed.