ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವಲ್ಲಿ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಹಾಗು ಕ್ಷೇತ್ರದ ಸಂಸದೆ, ಶೋಭಾ ಕರಂದ್ಲಾಜೆಯವರ ಸತತ ಪ್ರಯತ್ನದಿಂದ ಕ್ಷೇತ್ರಕ್ಕೆ ಭರಪೂರ ಅನುದಾನಗಳು ಕೇಂದ್ರ ಸರ್ಕಾರದಿಂದ ಹರಿದುಬರುತ್ತಿದೆ.
ಕ್ಷೇತ್ರದಲ್ಲಿನ ರಾಷ್ಟೀಯ ಹೆದ್ದಾರಿಗಳ ಅಭಿವೃದ್ಧಿಯ ಕುರಿತು ಈ ಹಿಂದೆ ಜನವರಿ ತಿಂಗಳಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಕೇಂದ್ರ ಭೂಸಾರಿಗೆ ಸಚಿವರಾದ ಶ್ರೀ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿ, ಅತೀ ಶೀಘ್ರದಲ್ಲಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಅನುದಾನಗಳನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದರು.
ಸಂಸದೆ ಶೋಭಾ ಕರಂದ್ಲಾಜೆಯವರ ಕೋರಿಕೆಯನ್ನು ಪರಿಗಣಿಸಿ ಕೇಂದ್ರ ಭೂಸಾರಿಗೆ ಸಚಿವರು ಈ ಕೆಳಗಿನ ರಸ್ತೆಗಳ ಅಭಿವೃದ್ಧಿಗೆ ಒಟ್ಟು 279.03 ಕೋಟಿ ರೂಪಾಯಿಗಳ ಅನುದಾನಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಿರುತ್ತಾರೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಹು ಬೇಡಿಕೆಯ ರಸ್ತೆಗಳನ್ನ ಅಭಿವೃದ್ಧಿಪಡಿಸಲು ಅನುಮೋದನೆ ನೀಡಿ, ಅನುದಾನಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತದ ಕೇಂದ್ರ ಸರ್ಕಾರಕ್ಕೆ ಹಾಗು ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿ ಅವರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ತಮ್ಮ ಪ್ರಕಟಣೆಯಲ್ಲಿ ಕೃತಜ್ಞತೆಗಳನ್ನು ತಿಳಿಸಿರುತ್ತಾರೆ.
Comments are closed.