ಬೆಂಗಳೂರು: ಕರ್ನಾಟಕದಿಂದ ನಡೆದ ರಾಜ್ಯಸಭಾ ಚುನಾವಣೆಯ ಮತದಾನ ಮತ್ತು ಎಣಿಕೆ ಶುಕ್ರವಾರ ನಡೆದಿದ್ದು, ತೀವ್ರ ಕುತೂಹಲ ಮೂಡಿಸಿದ್ದ ನಾಲ್ಕನೇ ಸ್ಥಾನವನ್ನು ಬಿಜೆಪಿ ಅಭ್ಯರ್ಥಿ ಲೆಹರ್ ಸಿಂಗ್ ಅವರು ಗೆದ್ದಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಕಾಂಗ್ರೆಸ್ ನಿಂದ ಜೈರಾಂ ರಮೇಶ್ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದು, ಜೆಡಿಎಸ್ ನ ಕುಪೇಂದ್ರ ರೆಡ್ಡಿ ಮತ್ತು ಕಾಂಗ್ರೆಸ್ ನ ಮನ್ಸೂರ್ ಅಲಿ ಖಾನ್ ಸೋಲು ಅನುಭವಿಸಿದ್ದಾರೆ.
ನಿರ್ಮಲಾ ಸೀತಾರಾಮನ್ 46 ಮತ,ಜಗ್ಗೇಶ್ 44 ಮೊದಲ ಪ್ರಾಶಸ್ತ್ಯದ ಮತ ಪಡೆದು ನಿರೀಕ್ಷಿತ ಗೆಲುವು ಸಾಧಿಸಿದರು. ಕಾಂಗ್ರೆಸ್ ನಿಂದ ಜೈರಾಂ ರಮೇಶ್ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದು, ಜೆಡಿಎಸ್ ನ ಕುಪೇಂದ್ರ ರೆಡ್ಡಿ 30 ಮತ ಮತ್ತು ಕಾಂಗ್ರೆಸ್ ನ ಮನ್ಸೂರ್ ಅಲಿ ಖಾನ್ 25 ಮತ ಪಡೆದು ಸೋಲು ಅನುಭವಿಸಿದ್ದಾರೆ.
Comments are closed.