ಮಂಗಳೂರು: ಪೋಲಿಸರ ಮೇಲೆ ಹಲ್ಲೆಗೆ ಯತ್ನಿಸಿದ ಇಬ್ಬರು ಕೊಲೆ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ಕಳೆದ ಸೋಮವಾರ ಬೈಕಂಪಾಡಿ ಸಮೀಪದ ಮೀನಕಳಿ ಬಳಿ ನಡೆದ ರೌಡಿ ಶೀಟರ್ ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳಾದ ಅರ್ಜುನ್ ಮೂಡುಶೆಡ್ಡೆ ಮತ್ತು ಮನೋಜ್ ಯಾನೆ ಬಿಂದಾಸ್ ಮನೋಜ್‌ರನ್ನು ಬಂಧಿಸಿದ್ದರು.
(ಸಾಂದರ್ಭಿಕ ಚಿತ್ರ)
ಶನಿವಾರ ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ಇನ್ನಷ್ಟು ಆರೋಪಿಗಳ ಬಂಧನಕ್ಕೆ ಕೊಂಡೊಯ್ಯುವ ವೇಳೆ ಈ ಇಬ್ಬರು ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಈ ವೇಳೆ ಸಿಸಿಬಿ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಅವರು ಮೂರು ಸುತ್ತು ಫೈರಿಂಗ್ ಮಾಡಿದ್ದು ಆರೋಪಿಗಳ ಕಾಲಿಗೆ ಗುಂಡೇಟು ಬಿದ್ದಿದೆ.
ಘಟನೆಯಲ್ಲಿ ಪಿಎಸ್‌ಐ ನಾಗೇಂದ್ರ, ಎಎಸ್‌ಐ ಡೇವಿಡ್, ಎಎಚ್‌ಸಿ ಸಂತೋಷ್ ಪೂಜಾರಿ ಗಾಯಗೊಂಡಿದ್ದು ಆರೋಪಿಗಳು ಹಾಗೂ ಪೊಲೀಸರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Comments are closed.