ಬೆಂಗಳೂರು: ರಾಜ್ಯದ ಹಲವೆಡೆ ಇಂದು (ಜೂ.17) ಬೆಳಿಗ್ಗೆನಿಂದ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 80 ಸ್ಥಳಗಳಲ್ಲಿ 21 ಸರ್ಕಾರಿ ಅಧಿಕಾರಿಗಳ ಕಚೇರಿ, ನಿವಾಸಗಳ ಮೇಲೆ ಮೇಲೆ ದಾಳಿ ನಡೆಸಿದ್ದು ಪರಿಶೀಲನೆ ನಡೆಸಲಾಗುತ್ತಿದೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇರೆಗೆ 300ಕ್ಕೂ ಹೆಚ್ಚು ತಂಡದಿಂದ ಏಕಕಾಲದಲ್ಲಿ ವಿವಿಧೆಡೆ ದಾಳಿ ನಡೆಸಲಾಗಿದ್ದು, ಮಹತ್ವದ ದಾಖಲೆ ಪತ್ರಗಳ ಪರಿಶೀಲನೆ ನಡೆಸಲಾಗುತ್ತಿದೆ.
ಕಲಬುರಗಿ ನಗರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯೋಜನಾಧಿಕಾರಿ ತಿಪ್ಪಣ್ಣ ಸಿರಸಗಿ ಮನೆ ಮೇಲೆ ದಾಳಿ ನಡೆದಿದೆ. ಬೀದರ್ ನಲ್ಲಿ ಕೆಲಸ ಮಾಡುತ್ತಿರುವ ತಿಪ್ಪಣ್ಣ ಕೆಲಸ ಕೊಡಿಸುವುದಾಗಿ ಮಹಿಳೆಯರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಆರೋಪವಿದೆ.
ಬೆಳಗಾವಿಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿ ವಿ. ವೈ. ಪವಾರ್ ಅವರ ನಿವಾಸದ ಮೇಲೆ ದಾಳಿ ನಡೆದಿದೆ. ಬಾಗಲಕೋಟೆ ಆರ್ ಟಿ ಅಧಿಕಾರಿ ಯಲ್ಲಪ್ಪ ಪಡಸಾಲೆ ಅವರ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆದಿದೆ. ಉಡುಪಿಯಲ್ಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಾವೇರಿಯಲ್ಲಿ ತುಂಗಾ ಮೇಲ್ದಂಡೆ ಯೋಜನೆ ಸಹಾಯಕ ಯೋಜನಾಧಿಕಾರಿ ಎಇ ಚಂದ್ರಪ್ಪ ಓಲೇಕಾರ್ ಅವರ ನಿವಾಸದ ಮೇಲೆ ದಾಳಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎಸ್ ಡಿಎ ತಿಮ್ಮಯ್ಯ ಅವರ ನಿವಾಸ ಸೇರಿದಂತೆ ಮೂರು ಕಡೆಗಳಲ್ಲಿ ಏಕಕಾಲದಲ್ಲಿ ಎಸಿಬಿ ಅಧಿಕಾರಿಗಳು ನಡೆಸಿದ್ದಾರೆ. ಕಾರವಾರದ ಪಿಡಿಬ್ಲೂಡಿ ಎಂಜಿನಿಯರ್ ರಾಜೀವ್ ನಾಯ್ಕ್ ಅವರ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆದಿದೆ.
Comments are closed.