ಪ್ರಮುಖ ವರದಿಗಳು

ಕಾಶ್ಮೀರಿ ಪಂಡಿತರ ಕುರಿತ ಹೇಳಿಕೆ: ನಟಿ ಸಾಯಿ ಪಲ್ಲವಿ ವಿರುದ್ಧ ಭಜರಂಗದಳ ದೂರು

Pinterest LinkedIn Tumblr

ಹೈದರಾಬಾದ್‌: ಕಾಶ್ಮೀರಿ ಪಂಡಿತರ ಹತ್ಯೆ ಹಾಗೂ ಗೋವು ಸಾಗಿಸುವ ಮುಸ್ಲಿಮರ ಮೇಲಿನ ದಾಳಿಯನ್ನು ಹೋಲಿಸಿ ಹೇಳಿಕೆ ನೀಡಿದ್ದ ನಟಿ ಸಾಯಿ ಪಲ್ಲವಿ ವಿರುದ್ಧ ದೂರು ದಾಖಲು ಮಾಡಲಾಗಿದೆ.

ಸಂದರ್ಶನವೊಂದರಲ್ಲಿ ಸಾಯಿ ಪಲ್ಲವಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಭಜರಂಗದಳದ ಮುಖಂಡರು ಹೈದರಾಬಾದ್‌ನ ಸುಲ್ತಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂದರ್ಶನದ ವಿಡಿಯೋ ನೋಡಿದ ಬಳಿಕ ಕಾನೂನು ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

‘ವಿರಾಟ ಪರ್ವಂ’ ಚಿತ್ರದ ಪ್ರಚಾರದ ಪ್ರಯುಕ್ತ ಮಾಧ್ಯಮ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದ ಸಾಯಿ ಪಲ್ಲವಿ, ‘ಕಾಶ್ಮೀರಿ ಪಂಡಿತರ ಹತ್ಯೆ, ಗೋವು ಸಾಗಿಸುವ ಮುಸ್ಲಿಮರ ಮೇಲಿನ ದಾಳಿಗಳು ಒಂದೇ ತೆರನಾದ ಕ್ರೌರ್ಯವನ್ನು ಹೊಂದಿವೆ. ಈ ರೀತಿ ಮಾಡುವುದು ಮನುಷ್ಯತ್ವವಲ್ಲ, ನಾವು ಮೊದಲು ಒಳ್ಳೆಯ ಮನುಷ್ಯರಾಗಬೇಕು’ ಎಂದು ಹೇಳಿದ್ದರು.

ಅವರ ಈ ಹೇಳಿಕೆಯಿಂದ ವಿವಾದ ಸೃಷ್ಟಿಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪರ ಹಾಗೂ ವಿರೋಧ ಚರ್ಚೆಗಳು ನಡೆಯುತ್ತಿವೆ.

Comments are closed.