ಮಂಗಳೂರು/ಉಡುಪಿ: ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಬಿರುಸು ಪಡೆಯುವ ನಿರೀಕ್ಷೆ ಹೆಚ್ಚಿದೆ. ಜೂ.25 ಮತ್ತು 26ರಂದು ಆರೆಂಜ್ ಅಲರ್ಟ್ ಘೊಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ಶುಕ್ರವಾರ ಮಳೆಯಾಗಿತ್ತು. ಹವಾಮಾನ ಇಲಾಖೆ ಮಾಹಿತಿಯಂತೆ ಶುಕ್ರವಾರ ಮಂಗಳೂರಿನಲ್ಲಿ 29.1 ಡಿ.ಸೆ. ಗರಿಷ್ಠ ಮತ್ತು 23.5 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
ಇನ್ನು ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಹಾಗೂ ಶನಿವಾರ ಸಾಧಾರಣ ಮಳೆಯಾಗಿದೆ. ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಇತ್ತಾದರೂ ನಿರಂತರ ಮಳೆ ಸುರಿಯಲಿಲ್ಲ. ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರವಿತ್ತು.
Comments are closed.