ಕರ್ನಾಟಕ

ಮನೆ ಕಳವು ಪ್ರಕರಣ: ಅಸ್ಸಾಂ ಮೂಲದ ಆರೋಪಿಗಳ ಸೆರೆ, 11.70 ಲಕ್ಷ ಮೌಲ್ಯದ ಚಿನ್ನಾಭರಣ ವಶ

Pinterest LinkedIn Tumblr

ಮಡಿಕೇರಿ: ಕೊಡಗು ಜಿಲ್ಲೆಯ ಸಿದ್ದಾಪುರದ ಸಮೀಪ ಮೇಕೂರು ಹೊಸ್ಕೇರಿ ಗ್ರಾಮದ ಕೂತಂಡ ಸುಬ್ಬಯ್ಯ ಅವರ ನಿವಾಸದಲ್ಲಿ ಕಳ್ಳತನ ಮಾಡಿದ್ದ ಅಸ್ಸಾಂ ರಾಜ್ಯದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 11.70 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಮತ್ತಿಬ್ಬರು ಆರೋಪಿಗಳು ಅಸ್ಸಾಂಗೆ ಪರಾರಿಯಾಗಿದ್ದು, ಅವರ ಪತ್ತೆಗಾಗಿ ತಂಡವೊಂದು ಅಸ್ಸಾಂಗೆ ತೆರಳಿದೆ.

ಕಳ್ಳತನ ನಡೆದಿದ್ದ ಕೂತಂಡ ಸುಬ್ಬಯ್ಯ ಅವರ ಮನೆಯ ಪಕ್ಕದ ಎಸ್ಟೇಟ್‌ನಲ್ಲಿ ಅಸ್ಸಾಂನಿಂದ ಬಂದು ಕಾರ್ಮಿಕರಾಗಿ ದುಡಿಯುತ್ತಿದ್ದ ಕುರ್ಬನ್ ಅಲಿ (20), ಮಹಿರುದ್ದೀನ್ ಅಲಿ (28), ಸಫಿಕೂಲ್ ಇಸ್ಲಾಂ ಹಾಗೂ ಮೊಹಿಬುಲ್ ಇಸ್ಲಾಂ ಅವರು ಹೊಂಚು ಹಾಕಿ ಈ ಕೃತ್ಯ ಎಸಗಿದ್ದರು. ಅವರಲ್ಲಿ ಕುರ್ಬನ್ ಅಲಿ, ಮಹಿರುದ್ದೀನ್ ಅಲಿ ಬಂಧಿತರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಡಿವೈಎಸ್‌ಪಿ ಗಜೇಂದ್ರಪ್ರಸಾದ್ ಅವರ ನೇತೃತ್ವದಲ್ಲಿ ಸಿಪಿಐ ಪಿ.ವಿ.ವೆಂಕಟೇಶ್, ಇನ್‌ಸ್ಪೆಕ್ಟರ್ ನಾಗೇಶ್ ಕದ್ರಿ, ಸಬ್‌ ಇನ್‌ಸ್ಪೆಕ್ಟರ್‌ಗಳಾದ ಮೋಹನ್‌ರಾಜ್, ಪ್ರಮೋದ್, ಎಎಸ್‌ಐಗಳಾದ ತಮ್ಮಯ್ಯ, ಬಿ.ಸಿ.ದೇವಯ್ಯ ಹಾಗೂ ಸಿಬ್ಬಂದಿಗಳ ತಂಡ ಈ ಕಾರ್ಯಾಚರಣೆಯಲ್ಲಿದ್ದರು.

 

Comments are closed.