ಕರ್ನಾಟಕ

ಬೆಳಗಾವಿ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ದುರ್ಮರಣ; ಮೃತರ ಕುಟುಂಬಕ್ಕೆ ಸಿಎಂ ಬೊಮ್ಮಾಯಿ ಪರಿಹಾರ ಘೋಷಣೆ

Pinterest LinkedIn Tumblr

ಬೆಳಗಾವಿ: ಬೆಳಗಾವಿ ಬಳಿ ಭಾನುವಾರ ಭೀಕರ ಅಪಘಾತ ಸಂಭವಿಸಿದೆ. ಕ್ರೂಸರ್ ಪಲ್ಟಿಯಾಗಿ ಏಳು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದು ಕಣಬರಗಿ ಸಮೀಪ ಈ ದುರ್ಘಟನೆ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ಪಲ್ಟಿಯಾಗಿ ರಸ್ತೆಯಿಂದ ಸುಮಾರು ಅಡಿಗಳಷ್ಟು ದೂರ ಸಾಗಿ ಬಳ್ಳಾರಿ ನಾಲೆಗೆ ಬಿದಿದ್ದೆ. ಇದರಿಂದಾಗಿ ಏಳು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಇನ್ನೂ ಮೂವರು ಸ್ಥಿತಿ ಚಿಂತಾಜನಕವಾಗಿದೆ. ಇವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಕ್ರೂಸರ್ ಗೋಕಾಕ್ ನಿಂದ ಬೆಳಗಾವಿಗೆ ತೆರಳುತಿತ್ತು. ಮೃತರೆಲ್ಲರೂ ರೈಲ್ವೆ ಇಲಾಖೆಯಲ್ಲಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.  ದುರಂತ ಸ್ಥಳಕ್ಕೆ ಬೆಳಗಾವಿ ನಗರ  ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿಎಂ ಸಂತಾಪ, ಪರಿಹಾರ ಘೋಷಣೆ…
ಅಪಘಾತದ ಬಗ್ಗೆ ಕಳವಳ ವ್ಯಕ್ತಪಡಿಸಿ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದು ”ಬೆಳಗಾವಿಯಲ್ಲಿ ಬಳಿ ಇಂದು ನಡೆದ ಅಪಘಾತದಲ್ಲಿ 7 ಜನ ಮೃತಪಟ್ಟು, ಹಲವರು ಗಾಯಗೊಂಡಿರುವ ವಿಷಯ ತಿಳಿದು ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಈ ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ನೀಡಲಾಗುವುದು” ಎಂದು ಬರೆದುಕೊಂಡಿದ್ದಾರೆ.

Comments are closed.