ಕುಂದಾಪುರ: ಬೈಂದೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಸರ್ಕಾರಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ಸಂಭವಿಸಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದಲ್ಲಿ ಸರಕಾರಿ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿತು. ಕಾರು
ಕುಂದಾಪುರದಿಂದ ಭಟ್ಕಳ ಕಡೆಗೆ ಸಾಗುತ್ತಿತ್ತು. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಬೈಂದೂರು ಠಾಣೆ ಪಿಎಸೈ ಪವನ್ ನಾಯಕ್ ಭೇಟಿ ನೀಡಿದ್ದಾರೆ.
Comments are closed.