ಕರಾವಳಿ

ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಪಿಟಿ ಉಷಾ, ವಿಜಯೇಂದ್ರ ಪ್ರಸಾದ್‌, ಇಳಯರಾಜ ರಾಜ್ಯಸಭೆಗೆ ನಾಮನಿರ್ದೇಶನ

Pinterest LinkedIn Tumblr

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ , ಕೇರಳದ ಮಾಜಿ ಅಥ್ಲೀಟ್‌ ಪಿ.ಟಿ ಉಷಾ , ಆಂಧ್ರಪ್ರದೇಶದ ವಿ.ವಿಜಯೇಂದ್ರ ಪ್ರಸಾದ್‌ , ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

ವೀರೇಂದ್ರ ಹೆಗ್ಗಡೆ ಅವರನ್ನು ಸಮಾಜ ಸೇವೆ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ. ಪಿ.ಟಿ.ಉಷಾ ಅವರನ್ನು ಕ್ರೀಡಾ ಕ್ಷೇತ್ರದಿಂದ, ವಿಜಯೇಂದ್ರ ಪ್ರಸಾದ್ ಅವರನ್ನು ಸಿನಿಮಾ ಕ್ಷೇತ್ರದಿಂದ ಹಾಗೂ ಇಳಯರಾಜಾ ಅವರನ್ನು ಸಂಗೀತ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಯ್ಕೆಯಾದ ಅಭ್ಯರ್ಥಿಗಳಿಗೆ ಶುಭ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ವೀರೇಂದ್ರ ಹೆಗ್ಗಡೆಯವರು ಅತ್ಯುತ್ತಮ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ವೀಕ್ಷಿಸಲು ನನಗೆ ಅವಕಾಶವಿದೆ. ಅವರು ಖಂಡಿತವಾಗಿಯೂ ಸಂಸತ್ತಿನ ಕಲಾಪಗಳನ್ನು ಪುಷ್ಟೀಕರಿಸುತ್ತಾರೆ’ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

 

Comments are closed.