ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರ ಉಳಿಯಾರಗೊಳಿ ದಂಡತೀರ್ಥ ಬಳಿ ಟ್ಯಾಂಕರ್’ವೊಂದರಿಂದ ಲಿಕ್ವಿಡ್ ಕಾರ್ಬನ್ ಡೈಯಾಕ್ಸೈಡ್ ಸೋರಿಕೆಯಾಗುತ್ತಿದ್ದು ಆತಂಕಕ್ಕೆ ಸೃಷ್ಟಿಯಾಗಿತ್ತು.
ಮಂಗಳೂರು ಕಡೆಗೆ ತೆರಳುತ್ತಿರುವ ಟ್ಯಾಂಕರ್ ನ ಹೊರ ಭಾಗದಲ್ಲಿ ಲಿಕ್ವಿಡ್ ಸೋರಿಕೆಯಾಗುತ್ತಿದ್ದು, ಸುತ್ತಲೂ ಹೊಗೆ ಆವರಿಸಿಕೊಂಡಿದೆ.ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಾಏಕಿ ಹೊಗೆಯಂತೆ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಹಾಗೂ ಇತರೆ ವಾಹನಗಳ ಪ್ರಯಾಣಿಕರು ಗಾಬರಿಗೊಂಡಿದ್ದರು.
ಉಡುಪಿಯಿಂದ ಮಂಗಳೂರು ಕಡೆಗೆ ಲಿಕ್ವಿಡ್ ಕಾರ್ಬನ್ ಡಯಾಕ್ಸೈಡ್ ಗ್ಯಾಸ್ ಹೊತ್ತೊಯ್ಯುತ್ತಿದ್ದ ಟ್ಯಾಂಕರ್, ಸೇಪ್ಟಿ ಪಿನ್ ತೆರೆದುಕೊಂಡಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ತಕ್ಷಣ ಸ್ಥಳಕ್ಕೆ ಅಗ್ನಿಶಾಮಕದಳದವರು ಹಾಗೂ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
Comments are closed.