ಉಡುಪಿ: ಲಾರಿಯೊಂದು ಬೈಕ್ ಸವಾರನ ಮೇಲೆ ಚಲಿಸಿದ ಪರಿಣಾಮದಿಂದಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಗೋವಿಂದ ದಾಸ ಕಾಲೇಜು ಮುಂಭಾಗ ಗುರುವಾರ ರಾತ್ರಿ ನಡೆದಿದೆ. ಕಟಪಾಡಿ ಮಟ್ಟು ನಿವಾಸಿ ಅಕ್ಷಯ್(33) ಮೃತ ದುರ್ದೈವಿ.
ಅಕ್ಷಯ್ ಅವರು ಮಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಟಪಾಡಿಯ ತನ್ನ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಸುರತ್ಕಲ್ ಗೋವಿಂದ ದಾಸ ಕಾಲೇಜು ಮುಂಭಾಗದಲ್ಲಿ ಲಾರಿ ಅಪಘಾತದಲ್ಲಿ ಲಾರಿಯಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Comments are closed.