ಕರಾವಳಿ

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತ ಉಪನ್ಯಾಸಕ ನೇಣು ಬಿಗಿದು ಆತ್ಮಹತ್ಯೆ

Pinterest LinkedIn Tumblr

ಕುಂದಾಪುರ: ತಾಲೂಕಿನಲ್ಲಿ ಕಾರ್ಯಚರಿಸುತ್ತಿರುವ ಖಾಸಗಿ ಕಾಲೇಜೊಂದರಲ್ಲಿ ಗಣಿತಶಾಸ್ತ್ರ ಉಪನ್ಯಾಸಕರಾಗಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಶರಣಾದ ಘಟನೆ ಶನಿವಾರ ಬೆಳಕಿಗೆ ಬಂದಿದೆ.

ಮೃತ ವ್ಯಕ್ತಿಯನ್ನು ಕುಂದಾಪುರದ ಖಾಸಗಿ ಕಾಲೇಜಿನಲ್ಲಿ ಗಣಿತ ಶಾಸ್ತ್ರ ಉಪನ್ಯಾಸಕರಾಗಿದ್ದ ಮಂಗಳೂರು ನೆಲ್ಯಾಡಿ ಮೂಲದ ಆನಂದ (34) ಎಂದು ಗುರುತಿಸಲಾಗಿದೆ.

ಕುಂದಾಪುರದ ಅಂಕದಕಟ್ಟೆಯಲ್ಲಿನ ಬಾಡಿಗೆ ಮನೆಯಲ್ಲಿ ಆನಂದ್ ಅವರು ಶುಕ್ರವಾರ ತಡ ರಾತ್ರಿ ತನಕ ಪರೀಕ್ಷೆಗಾಗಿ ಪ್ರಶ್ನೆ ಪತ್ರಿಕೆ ತಯಾರು ಮಾಡಿ ಬಳಿಕ ಮಲಗಲು ತೆರಳಿದ್ದರು. ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಎರಡು ತಿಂಗಳ ಹಿಂದೆ ಆನಂದ್ ಅವರು ಅದೇ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕಿಯೋರ್ವರನ್ನು ಪ್ರೀತಿಸಿ ಮದುವೆಯಾಗಿದ್ದು ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅಂದಾಜಿಸಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.