ಮಂಗಳೂರು: ಬೆಳ್ಳಾರೆಯಲ್ಲಿ ಪ್ರವೀಣ್ ಕೊಲೆಯ ಬೆನ್ನಲ್ಲೇ ಮಂಗಳೂರಿನ ಸುರತ್ಕಲ್ ಸಮೀಪ ಕೊಲೆ ಯತ್ನ ನಡೆದಿದ್ದು, ಗಂಭೀರ ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಸುರತ್ಕಲ್ ಸಮೀಪದ ಎಸ್.ಕೆ ಮೊಬೈಲ್ ಸಮೀಪದಲ್ಲಿ ಕೊಲೆ ನಡೆದಿದೆ. ಅಟ್ಟಾಡಿಸಿ ಮೂವರು ದುಷ್ಕರ್ಮಿಗಳು ಫಾಯಿಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಕೂಡಲೆ ಗಂಭೀರ ಸ್ಥಿತಿಯಲ್ಲಿ ಫಾಝಿಲ್ ನನ್ನು ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದು ಚಿಕಿತ್ಸೆ ಫಲಿಸದೆ ಫಾಝಿಲ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನಿಗೆ ಹಿಗ್ಗಾಮುಗ್ಗ ದಾಳಿ ನಡೆಸಿದ್ದಾರೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಯದ್ವತದ್ವ ದಾಳಿ ನಡೆಸಿ ಪರಾರಿಯಾಗಿತ್ತು. ಸುರತ್ಕಲ್ ಜವಳಿ ಅಂಗಡಿಯ ಮುಂಭಾಗ ಈ ಘಟನೆ ನಡೆದಿದೆ.
ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿದ್ದಾರೆ.
Comments are closed.