ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಗುರುವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕುಟುಂಬಕ್ಕೆ ಸಾಂತ್ವಾನ ಹೇಳಿ, 25 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು.
ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸುಳ್ಯ ತಾಲೂಕಿನ ನೆಟ್ಟೂರು ಗ್ರಾಮಕ್ಕೆ ಭೇಟಿ ನೀಡಿ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲೂ ಸರ್ಕಾರ ತನಿಖೆ ನಡೆಸುತ್ತಿದೆ. ಶೀಘ್ರದಲ್ಲೇ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು. ಸರ್ಕಾರ ಮತ್ತು ಬಿಜೆಪಿ ನಿಮ್ಮೊಂದಿಗೆ ಇದೆ ಎಂದು ಸಿಎಂ ಬೊಮ್ಮಾಯಿ ಪ್ರವೀಣ್ ಕುಟುಂಬಕ್ಕೆ ಧೈರ್ಯ ತುಂಬಿದರು.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಇದ್ದರು.
Comments are closed.