ಮಂಗಳೂರು: ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೊಂದು ಕೊಲೆಯಾಗಿದ್ದು ಮಂಗಳೂರಿನ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಗುರುವಾರ ರಾತ್ರಿ 8 ಗಂಟೆಗೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರಿನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಮಂಗಳೂರು ನಗರದ ಹೊರವಲಯದಲ್ಲಿರುವ ಸುರತ್ಕಲ್ನ ಎಸ್.ಕೆ.ಮೊಬೈಲ್ಸ್ ಅಂಗಡಿ ಬಳಿ ಫಾಜಿಲ್ ಮಂಗಲಪೇಟೆ(23) ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಗಾಯಾಳು ಫಾಜಿಲ್ರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
4 ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
ಮಂಗಳೂರು ನಗರ ವ್ಯಾಪ್ತಿಯ 4 ಪೊಲೀಸ್ ಠಾಣಾ ಸರಹದ್ದಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶನಿವಾರದವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಮದ್ಯದಂಗಡಿ ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರು ಸುರತ್ಕಲ್, ಪಣಂಬೂರು, ಮುಲ್ಕಿ ಮತ್ತು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಬೆಳಗಿನ ಜಾವದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಸ್ಥಳದಲ್ಲಿ ರಾತ್ರಿಯಿಂದಲೇ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮೊಕ್ಕಾಂ ಹೂಡಿ ಪರಿಶೀಲನೆ ನಡೆಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಸುರತ್ಕಲ್‌ನಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮಂಗಳೂರಿನ ಸುರತ್ಕಲ್‌ಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ರವಾನಿಸಲಾಗಿದೆ.
Comments are closed.