ಮಂಗಳೂರು: ಸುರತ್ಕಲ್‌ನ ಮಂಗಳಪೇಟೆಯಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾದ ಮಹಮ್ಮದ್ ಫಾಝಿಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುರತ್ಕಲ್, ಬಜಪೆ, ಪಣಂಬೂರು, ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 21 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಎಡಿಜಿಪಿ ಆಲೋಕ್ ಕುಮಾರ್ ತನಿಖೆಯ ಉಸ್ತುವಾರಿ ವಹಿಸಿದ್ದು, ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳ ಪತ್ತೆಗೆ ಐದು ತಂಡಗಳನ್ನು ರಚಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಹಿಂದೆ ಜಿಲ್ಲೆಯಲ್ಲಿ ಡಿಸಿಪಿಯಾಗಿದ್ದ, ಪ್ರಸ್ತುತ ಹಾಸನ ಎಸ್‌ಪಿ ಆಗಿರುವ ಹರಿರಾಂ ಶಂಕರ್ ಅವರನ್ನೂ ಮತ್ತೆ ತನಿಖೆಗಾಗಿ ಕರೆಯಿಸಲಾಗಿದೆ.
ಈ ಪ್ರಕರಣದಲ್ಲಿ 21 ಕ್ಕೂ ಹೆಚ್ಚು ಶಂಕಿತ ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದೇವೆ. ನಮಗೆ ಸಂಸ್ಥೆ, ಸಂಘಟನೆಗಳು ಯಾವುದೇ ಇತರ ಲಿಂಕ್ ನಮಗೆ ಮುಖ್ಯವಲ್ಲ. ಹಂತಕರನ್ನು ಬಂಧಿಸುವುದು ನಮ್ಮ ಮೊದಲ ಆದ್ಯತೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಮೊಬೈಲ್ ಕರೆಗಳ ಮಾಹಿತಿ, ಯಾವ ಕಾರಣಕ್ಕೆ ಕೊಲೆ ನಡೆದಿದೆ, ಪ್ರವೀಣ್ ಹತ್ಯೆಗೂ ಇದಕ್ಕೂ ಏನಾದರೂ ಸಂಬಂಧ ಇದೆಯೇ ಎನ್ನುವ ನಿಟ್ಟಿನಲ್ಲಿ ಸಹಿತ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ.
Comments are closed.