ಕುಂದಾಪುರ: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ 2ನೇ ತರಗತಿಯ ವಿದ್ಯಾರ್ಥಿನಿ ನೀರುಪಾಲಾದ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ 7ವರ್ಷ ಪ್ರಾಯದ ಸನ್ನಿಧಿ ನೀರು ಪಾಲಾಗಿದ್ದು ಹುಡುಕಾಟ ನಡೆಯುತ್ತಿದೆ.
ಸ.ಹಿ.ಪ್ರಾ ಶಾಲೆ ಚಪ್ಪರಿಕೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ ಸನ್ನಿಧಿ ಸೋಮವಾರ ಸಂಜೆ ಶಾಲೆ ಮುಗಿಸಿ ಮನೆಗೆ ಬರುವಾಗ ಬೀಜಮಕ್ಕಿ ಎಂಬಲ್ಲಿ ಕಾಲು ಸಂಕವಿದ್ದು ಈ ಕಾಲು ಸಂಕ ದಾಟುವಾಗ ಆಯಾತಪ್ಪಿ ಹಳ್ಳಕ್ಕೆ ಬಿದ್ದಿದ್ದಾಳೆ. ವಿಷಯ ತಿಳಿದು ಸಾರ್ವಜನಿಕರು ಹುಡುಕಾಟ ಆರಂಭಿಸಿದ್ದು, ಈ ಹಳ್ಳ ಬೊಳಂಬಳ್ಳಿ ನದಿಗೆ ಸೇರಿದ್ದು ನೀರಿನ ರಭಸಕ್ಕೆ ಜೋರಾಗಿದ್ದು ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗುತ್ತಿರುವ ಸಾಧ್ಯತೆ ಶೋಧ ಕಾರ್ಯ ಭರದಿಂದ ಸಾಗಿದೆ.
ಇನ್ನು ಸ್ಥಳಕ್ಕೆ ಬೈಂದೂರು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಪೂಜಾರಿ, ತಹಶಿಲ್ದಾರ್ ಕಿರಣ್ ಗೌರಯ್ಯ, ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Comments are closed.