ಮಡಿಕೇರಿ: ವಿಪರೀತ ಮಳೆಯಾಗಿ ಪ್ರವಾಹ ಉಂಟಾಗಿ ಹಾನಿಗೀಡಾದ ಕೊಡಗು ಜಿಲ್ಲೆಯ ಮಡಿಕೇರಿ, ಕುಶಾಲನಗರ ತಾಲ್ಲೂಕುಗಳಿಗೆ ನಿನ್ನೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದ್ದರು.
ಈ ವೇಳೆ ಕುಶಾಲನಗರ ತಾಲ್ಲೂಕಿನ ಗೊಡ್ಡಹೊಸೂರು ಎಂಬಲ್ಲಿಗೆ ಹೋಗಿದ್ದ ವೇಳೆ ಸಿದ್ದರಾಮಯ್ಯನವರ ಕಾರಿಗೆ ಕಿಡಿಗೇಡಿಗಳು ಮೊಟ್ಟೆ ಎಸೆದಿದ್ದಾರೆ. ಸಿದ್ದರಾಮಯ್ಯನವರು ಮುಸ್ಲಿಂ ಏರಿಯಾ ಹೇಳಿಕೆ ನೀಡಿದ್ದೇ ಹಿಂದೂ ಕಾರ್ಯಕರ್ತರ ಆಕ್ರೋಶ, ಪ್ರತಿಭಟನೆಗೆ ಕಾರಣವಾಗಿದೆ ಎನ್ನಲಾಗಿದೆ.
9 ಮಂದಿ ಬಂಧನ-ಬಿಡುಗಡೆ: ಸಿದ್ದರಾಮಯ್ಯನವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದಲ್ಲಿ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದ ಪೊಲೀಸರು ಇದುವರೆಗೆ 9 ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿ ಬಿಟ್ಟಿದ್ದಾರೆ. ಬಂಧಿತರು ಬಿಜೆಪಿ ಕಾರ್ಯಕರ್ತರು ಎಂದು ಗೊತ್ತಾದ ಕೂಡಲೇ ಶಾಸಕರಾದ ಅಪ್ಪಚ್ಚು ರಂಜನ್, ಕೆ ಜಿ ಬೋಪಯ್ಯ ಕುಶಾಲನಗರ ಪೊಲೀಸ್ ಠಾಣೆಗೆ ರಾತ್ರೋರಾತ್ರಿ ದೌಡಾಯಿಸಿದರು. ತಡರಾತ್ರಿ 9 ಜನರ ಮೇಲೆ ಎಫ್‍ಐಆರ್ ದಾಖಲಿಸಿ, ಮಧ್ಯರಾತ್ರಿ 2 ಗಂಟೆಗೆ ಜಡ್ಜ್ ಮುಂದೆ ಪೊಲೀಸರು ಹಾಜರುಪಡಿಸಿದರು.
Comments are closed.