ಚಿತ್ರದುರ್ಗ: ಮುರುಘಾ ಮಠದ ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತೆಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ.
ಪ್ರಕರಣ ದಾಖಲಾಗಿ 6 ದಿನಗಳ ನಂತರ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್, ಮೊಳಕಾಲ್ಮೂರು ಠಾಣೆ ಸಿಪಿಐ ಸತೀಶ್ ಮಠದ ಒಳಗೆ ಪ್ರವೇಶಿಸಿ, ಶ್ರೀಯನ್ನು ಬಂಧಿಸಿದರು. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದು ನ್ಯಾಯಾಧೀಶರೆದುರು ಹಾಜರುಪಡಿಸಿದ್ದು 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ, ಶ್ರೀಗಳ ವಿರುದ್ಧ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದರ ಬೆನ್ನಿಗೆ ಮುರುಘಾ ಮಠದ ಲೈಂಗಿಕ ಪ್ರಕರಣಗಳ ಹಿನ್ನೆಲೆಯಲ್ಲಿ ಮುರುಘಾ ಶ್ರೀಯನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುರುಘಾಮಠದ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಕಳೆದ ಶುಕ್ರವಾರ ಮುರುಘಾ ಶ್ರೀಗಳ ವಿರುದ್ಧ ಮೈಸೂರಿನ ನಜರ್‌ಬಾದ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸಂತ್ರಸ್ತ ಬಾಲಕಿಯರು ಇಲ್ಲಿನ ಒಡನಾಡಿ ಸಂಸ್ಥೆ ನೆರವು ಪಡೆದು ಪ್ರಕರಣ ದಾಖಲಿಸಿದ್ದರು. ಬಳಿಕ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆ ಆಗಿತ್ತು. ಪೊಕ್ಸೋ ಪ್ರಕರಣದ ಜೊತೆಗೆ ಶ್ರೀಗಳ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿಯೂ ಪ್ರಕರಣ ದಾಖಲಾಗಿದೆ.
Comments are closed.