ಪ್ರಮುಖ ವರದಿಗಳು

ನಿರ್ಮಾಪಕ ರವೀಂದರ್‌ ಕೈ ಹಿಡಿದ ಖ್ಯಾತ ನಿರೂಪಕಿ, ನಟಿ ಮಹಾಲಕ್ಷ್ಮೀ

Pinterest LinkedIn Tumblr

ಚೆನ್ನೈ: ತಮಿಳು ಚಿತ್ರರಂಗದಲ್ಲಿ ನಟಿ, ನಿರೂಪಕಿಯಾಗಿರುವ ಮಹಾಲಕ್ಷ್ಮೀ ಮತ್ತು ಖ್ಯಾತ ನಿರ್ಮಾಪಕ ರವೀಂದರ್‌ ಚಂದ್ರಶೇಖರನ್‌ ಇಬ್ಬರೂ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ತಿರುಪತಿ ಸನ್ನಿಧಿಯಲ್ಲಿ ಇಬ್ಬರ ವಿವಾಹ ಜರುಗಿದ್ದು, ಮದುವೆ ಚಿತ್ರಗಳು ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡ್ತಿವೆ.

ನಟಿಯಾಗಿ, ನಿರೂಪಕಿಯಾಗಿ ಗಮನ ಸೆಳೆದಿದ್ದ ಮಹಾಲಕ್ಷ್ಮೀ, ರವೀಂದರ್‌ ಚಂದ್ರಶೇಖರ್ ನಿರ್ಮಿಸಿದ್ದ ‘ವಿಡಿಯುಮ್‌ ವಾರೈ ಕಾಥಿರು’ ಸಿನಿಮಾದಲ್ಲಿ ನಟಿಸಿದ್ದರು. ಆ ಸಿನಿಮಾದಲ್ಲಿ ವಿದಾರ್ಥ್‌ ಮತ್ತು ವಿಕ್ರಾಂತ್ ಮುಖ್ಯಭೂಮಿಕೆಯಲ್ಲಿದ್ದರು. ಧಾರಾವಾಹಿ ಕ್ಷೇತ್ರದಲ್ಲೂ ಮಹಾಲಕ್ಷ್ಮೀ ಹೆಸರು ಮಾಡಿದ್ದಾರೆ. ವಾಣಿ ರಾಣಿ, ಆಫೀಸ್‌, ಚೆಲ್ಲಮೇ, ಉಥಿರಿಪೂಕ್ಕಳ್, ಒರು ಕೈ ಒಸೈ ಸೇರಿದಂತೆ ಸಾಕಷ್ಟು ಧಾರಾವಾಹಿಗಳಲ್ಲಿ ಮಹಾಲಕ್ಷ್ಮೀ ನಟಿಸಿದ್ದಾರೆ. ಪ್ರಸ್ತುತ ಅವರು ನಟಿಸಿರುವ ಮಹಾರಸಿ ಎಂಬ ಧಾರಾವಾಹಿ ಪ್ರಸಾರವಾಗುತ್ತಿದೆ.

ರವೀಂದರ್‌ ಚಂದ್ರಶೇಖರನ್‌ ಅವರು ಕೂಡ ‘ನಟ್ಪುನ ಎನ್ನಡು ಥೆರಿಯುಮ’, ‘ಮುರುಂಗೈಕೈ ಚಿಪ್ಸ್’, ‘ವಿಡಿಯುಮ್‌ ವಾರೈ ಕಾಥಿರು’ ಮುಂತಾದ ಸಿನಿಮಾಗಳನ್ನು ತಮ್ಮ ಲಿಬ್ರಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.

ಇಬ್ಬರೂ ಸಹ ತಮ್ಮ ವಿವಾಹ ಕಾರ್ಯಕ್ರಮದ ಫೋಟೋಗಳನ್ನ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

Comments are closed.