ಕರ್ನಾಟಕ

ಎದೆನೋವಿನ ಕಾರಣ: ಜೈಲಿನಿಂದ ಮುರುಘಾ ಮಠದ ಶ್ರೀ ಆಸ್ಪತ್ರೆಗೆ ಶಿಫ್ಟ್..!

Pinterest LinkedIn Tumblr

ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪವಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಶರಣರನ್ನು ಪೋಕ್ಸೋ ಕಾಯ್ದೆಯಡಿ ಚಿತ್ರದುರ್ಗ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದರು. ಮುಂಜಾನೆಯವರೆಗೆ ಜೈಲಿನಲ್ಲಿದ್ದ ಶ್ರೀಗಳನ್ನು ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇಂದು ಬೆಳಗ್ಗೆ ಜೈಲಿನಿಂದ ಬಿಗಿ ಭದ್ರತೆಯಲ್ಲಿ ಜಿಲ್ಲಾಸ್ಪತ್ರೆಗೆ ಶ್ರೀಗಳನ್ನು ಕರೆತರಲಾಗಿದ್ದು ವೈದ್ಯರು ಅವರ ಆರೋಗ್ಯ ತಪಾಸಣೆ ಮಾಡಿದ್ದಾರೆ. ಕಳೆದ ಮಧ್ಯರಾತ್ರಿ ಮುರುಘಾ ಮಠಕ್ಕೆ ಆಗಮಿಸಿದ ಪೊಲೀಸರು ತನಿಖಾಧಿಕಾರಿ ಅನಿಲ್​​​​​ ಕುಮಾರ್​ ನೇತೃತ್ವದಲ್ಲಿ ಸ್ವಾಮೀಜಿಯನ್ನು ಬಂಧಿಸಿದರು. ಸ್ವಾಮೀಜಿಗೆ ನ್ಯಾಯಾಂಗ ಬಂಧನ ವಿಧಿಸಿದ ನಂತರ ಜೈಲಿಗೆ ಕರೆದೊಯ್ಯಲಾಗಿತ್ತು.

ಸ್ವಾಮೀಜಿಯನ್ನು ಪೊಲೀಸರು ವಶಕ್ಕೆ ಕೇಳುವ ಸಾಧ್ಯತೆಗಳಿದ್ದು, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಕೋರುವ ಪೊಲೀಸರು, ಲೈಂಗಿಕ ದೌರ್ಜನ್ಯದ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಲಿದ್ದಾರೆ.

ಎದೆನೋವು ಎಂದು ಸಮಸ್ಯೆ ಹೇಳಿಕೊಂಡು ಬಂದ ಶ್ರೀಗಳಿಗೆ ಇಸಿಜಿ ಮಾಡಲಾಗಿದೆ. ಆಸ್ಪತ್ರೆಯ ಮೂವರು ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ ಎಂಬ ಮಾಹಿತಿಯಿದೆ.

 

Comments are closed.