ಮಂಗಳೂರು: ಇಲ್ಲಿನ ಗರೋಡಿ ಬಳಿಯ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಅನಾರೋಗ್ಯದಿಂದ ಸೋಮವಾರ ಸಂಜೆ ನಿಧನ ಹೊಂದಿದ್ದಾರೆ.
ಶ್ರಿ ದುರ್ಗಾ ಸದನ್ ಸೌಜನ್ಯ ಲೇನ್ ಬಿಕರ್ನಕಟ್ಟೆ ನಿವಾಸಿಯಾದ ಜಯಂತ್ ಕುಮಾರ್ ಎಚ್.ಆರ್ ಅವರು ಕಂಕನಾಡಿಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ನಾಲ್ಕು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದರು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತ್ ಕುಮಾರ್ ಅವರನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ನಿಧನ ಹೊಂದಿದ್ದಾರೆ.
1997ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ನೇಮಕಾತಿ ಹೊಂದಿದ ಜಯಂತ್ ಸುಮಾರು 25 ವರ್ಷಗಳಲ್ಲಿ ದಕ್ಷಿಣ ಕನ್ನಡದ ಸುಳ್ಯ ಪೊಲೀಸ್ ಠಾಣೆ, ಮಂಗಳೂರು ನಗರದ ಉತ್ತರ ಮತ್ತು ದಕ್ಷಿಣ ಪೊಲೀಸ್ ಠಾಣೆ, ಉರ್ವ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ಕಂಕನಾಡಿ ನಗರ ಪೊಲೀಸ್ ಠಾಣೆ ಯಲ್ಲಿ ಪೋಲಿಸ್ ಹೆಡ್ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು.
Comments are closed.