ಕುಂದಾಪುರ: ನಾಡ ಕಡೆಯಿಂದ ತ್ರಾಸಿ ಕಡೆಗೆ ಮಾರುತಿ ಓಮಿನಿ ಕಾರಿನಲ್ಲಿ ಕಾನೂನು ಬಾಹಿರವಾಗಿ ಅಕ್ರಮ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.
700 ಕೆ.ಜಿ ಅನ್ನಭಾಗ್ಯ ಅಕ್ಕಿ ಸಹಿತ ಆರೋಪಿಗಳಾದ ಕೋಡಿ ಅಶ್ರಪ್ ಬ್ಯಾರಿ ಹಾಗೂ ರಜಬ್ ಎನ್ನುವರನ್ನು ವಶಕ್ಕೆ ಪಡೆಯಲಾಗಿದೆ.
ಖಚಿತ ಮಾಹಿತಿ ಮೇರೆಗೆ ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್ಐ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ಸಿಬ್ಬಂದಿಗಳ ತಂಡ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದ ಮೋವಾಡಿ ಗಾಣದಮಕ್ಕಿ ಕ್ರಾಸ್ ಬಳಿ ಪರಿಶೀಲನೆ ನಡೆಸುತ್ತಿರುವಾಗ ಮಾರುತಿ ಓಮಿನಿ ಕಾರು ಬಂದಿದ್ದು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಮಾರುತಿ ಓಮಿನಿ ವಾಹನದಲ್ಲಿ ಒಟ್ಟು 14 ಚೀಲಗಳಲ್ಲಿ ತುಂಬಿದ್ದ 15,400 ರೂ. ಮೌಲ್ಯದ 700 ಕೆ.ಜಿ ಬೆಳ್ತಿಗೆ ಅಕ್ಕಿ ವಶಕ್ಕೆ ಪಡೆಯಲಾಗಿದೆ.
ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಯಾರಿಂದಲೋ ಖರೀದಿಸಿ ಹೆಚ್ಚಿನ ಬೆಲೆಗೆ ಅಂಗಡಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಆರೋಪಿಗಳು ಅಕ್ಕಿ ಸಾಗಾಟ ಮಾಡುತ್ತಿರುವುದು ತನಿಖೆ ವೇಳೆ ತಿಳಿದುಬಂದಿದೆ.
Comments are closed.