ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಕಳೆದ ಎರಡು ವರ್ಷದಿಂದ ಕೊರೋನಾ ಹಿನ್ನೆಲೆ ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲ್ಪಟ್ಟ ನವರಾತ್ರಿ ಉತ್ಸವವನ್ನು ಈ ಬಾರಿ ಸಂಭ್ರಮದಿಂದ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಹೇಳಿದರು.
ಸೆಪ್ಟೆಂಬರ್ 26ರಿಂದ ಅಕ್ಟೋಬರ್ 5ರ ವರೆಗೆ ನಡೆಯಲಿರುವ ನವರಾತ್ರಿ ಉತ್ಸವದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ. ಅಕ್ಟೋಬರ್ 4 ರಂದು ನವಮಿಯಂದು ಮಧ್ಯಾಹ್ನ ರಥೋತ್ಸವ ನಡೆಯುವುದು ಈ ಬಾರಿಯ ವಿಶೇಷ. ಅಲ್ಲದೆ ವಿಜಯ ದಶಮಿ ದಿನ ಅಂದರೆ 5 ನೇ ತಾರಿಖಿನಂದು ಉಡುಪಿಯ ಹುಲಿವೇಷ ತಂಡ ದೇವಳಕ್ಕೆ ಆಗಮಿಸಿ ಕೊಲ್ಲೂರು ಮೂಕಾಂಬಿಕೆ ಎದುರು ನರ್ತನ ಮಾಡುವುದು ಮತ್ತೊಂದು ವಿಶೇಷವಾಗಿದೆ. ನವರಾತ್ರಿ ಉತ್ಸವಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳ ಸಹಸ್ರಾರು ಭಕ್ತರು ಆಗಮಿಸುವ ನಿರೀಕ್ಷೆ ಇದೆ.
ದೇಗುಲ ಪರಿಸರದಲ್ಲಿ ವಾಹನ ನಿಲುಗಡೆಗೆ ಕ್ರಮ ವಹಿಸುವುದು, ಅನ್ನಪ್ರಸಾದ ವ್ಯವಸ್ಥೆ ಸಹಿತ ಭಕ್ತರ ವಾಸ್ತವ್ಯಕ್ಕೆ ಸಮಸ್ಯೆಯಾಗದಂತೆ ಕ್ರಮವಹಿಸಲಾಗಿದೆ.
ವ್ಯವಸ್ಥಾಪನ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ ಈ ಸಂದರ್ಭ ಇದ್ದರು.
Comments are closed.