ಶಿವಮೊಗ್ಗ: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಏಳು ದಿನಗಳಿಗೆ ಇಳಿಸಿ ಸರಳಗೊಳಿಸುವ ಯೋಜನೆಯನ್ನು ಸುಗ್ರೀವಾಜ್ಞೆಯ ಮೂಲಕ ದೀಪಾವಳಿಗೆ ರಾಜ್ಯಾದ್ಯಂತ ಜಾರಿಗೆ ತರಲು ಸರ್ಕಾರ ತೀರ್ಮಾನಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಗರೀಬ್ ಕಲ್ಯಾಣ್ ಅನ್ನ ಯೋಜನೆ, ಉಚಿತ ಪಡಿತರ ವಿಸ್ತರಣೆಯನ್ನು ಡಿಸೆಂಬರ್ ವರೆಗೆ ವಿಸ್ತರಿಸಲು ಕೇಂದ್ರ ಸಂಪುಟ ಸಭೆ ನಿರ್ಧರಿಸಿದೆ. ಇದಕ್ಕಾಗಿ ಅಂದಾಜು 44,000 ಕೋಟಿ ರೂಪಾಯಿಗಳನ್ನು ವ್ಯಯಿಸಲಾಗುತ್ತದೆ.
ಸುಮಾರು 47 ಲಕ್ಷ ಕೇಂದ್ರ ಸರ್ಕಾರಿ ನೌಕರಿಗೆ 4 % ಡಿಎ ಹೆಚ್ಚಳ ವಾಗಲಿದೆ ಈ ಮೂಲಕ ನಮ್ಮ ಕೇಂದ್ರ ಹಾಗೂ ರಾಜ್ಯದ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರಕ್ಕೆ ಅಭಿನಂದನೆಗಳು ಎಂದು ಸಂಸದ ಬಿ. ವೈ ರಾಘವೇಂದ್ರ ತಿಳಿಸಿದರು.
ರಾಜು ತಾಲ್ಲೂರ್ ಅವರು ತಮ್ಮ ತಪ್ಪಿನ ಅರಿವಾಗಿ ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ, ಇವರ ನೇತೃತ್ವದಲ್ಲಿ ಪಕ್ಷ ಮತ್ತು ಸಂಘಟನೆಗೆ ಹೆಚ್ಚಿನ ಶಕ್ತಿ ಲಭಿಸಲಿ ಎಂದರು.
ಮಡಿವಾಳ ಸಮಾಜದ ಮುಖಂಡರಾದ ರಾಜು ತಾಲ್ಲೂರ್ ಅವರು ಬಿಜೆಪಿ ಕಾರ್ಯಾಲಯದಲ್ಲಿ ಇಂದು ಜಿಲ್ಲೆಯ ಭಾರತೀಯ ಜನತಾ ಪಕ್ಷದ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಕಾರ್ಯಕ್ರಮದಲ್ಲಿ ಸಂಸದ ಬಿ.ವೈ ರಾಘವೇಂದ್ರ, ಮಾಜಿ ಸಚಿವ ಹಾಲಿ ಶಾಸಕ ಕೆ. ಎಸ್ ಈಶ್ವರಪ್ಪ, ಜಿಲ್ಲಾಧ್ಯಕ್ಷ ಟಿ. ಡಿ ಮೇಘರಾಜ್, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಓಬಿಸಿ ಮೋರ್ಚಾದ ಜಿಲ್ಲಾಧ್ಯಕ್ಷ ಮಾಲತೇಶ್, ಸೊರಬ ಮಂಡಲದ ಅಧ್ಯಕ್ಷ ಪ್ರಕಾಶ್, ನಾಗರಾಜ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
Comments are closed.