ಬೆಂಗಳೂರು: ಪರೇಶ್ ಮೇಸ್ತ ಪ್ರಕರಣದಲ್ಲಿ ನಮ್ಮ ಮೇಲೆ ಮಾಡಿದ ಸುಳ್ಳು ಆರೋಪಕ್ಕಾಗಿ ಬಿಜೆಪಿಯು ಮಾನ ಮರ್ಯಾದೆ ಇದ್ದರೆ ಕ್ಷಮೆ ಕೋರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಅವರು, ‘ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿಯ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿ ಅವರಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು’.
‘ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ’ ಎಂದು ಟ್ವೀಟ್ ಮಾಡಿದ್ದಾರೆ.
Comments are closed.