ಬೆಂಗಳೂರು: ಕೆಲವು ತಿಂಗಳ ಹಿಂದೆ ದುಷ್ಕರ್ಮಿಗಳಿಂದ ಬರ್ಬರವಾಗಿ ಕೊಲೆಯಾದ ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ಕುಮಾರ್ ನೆಟ್ಟಾರು ಅವರ ಧರ್ಮಪತ್ನಿ ನೂತನ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸರ್ಕಾರದಿಂದ ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದ್ದಾರೆ.
ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ಕುಮಾರ್ ನೆಟ್ಟಾರು ಅವರ ಪತ್ನಿ ನೂತನ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಸರ್ಕಾರದಿಂದ ಕೆಲಸ ಕೊಡಿಸಿ ಮಂಗಳೂರಿನಲ್ಲಿ ಕಾರ್ಯನಿರ್ವಹಿಸಲು ಸಹಕರಿಸಿದಕ್ಕಾಗಿ ಧನ್ಯವಾದ ಸಮರ್ಪಿಸಿದರು.
ಸರ್ಕಾರದಿಂದ ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿ ಸಿಎಂ ಕಚೇರಿಯಲ್ಲಿ ಕೆಲಸ ಕೊಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಬಳಿಕ ಸರ್ಕಾರದಿಂದ ಅಧಿಕೃತ ಆದೇಶ ಕೂಡ ಬಂದಿತ್ತು. ಈ ವೇಳೆ ಮಂಗಳೂರಿನಲ್ಲಿ ಕೆಲಸ ಕೊಡುವಂತೆ ಬೇಡಿಕೆ ಕೇಳಿ ಬಂದಿದ್ದು ಇದನ್ನು ಮನಗಂಡು ಸಿಎಂ ಬೊಮ್ಮಾಯಿ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಾರೆ.
Comments are closed.