ಕರಾವಳಿ

ಉಳ್ಳಾಲದಲ್ಲಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದು ಪತಿಯೂ ಆತ್ಮಹತ್ಯೆ

Pinterest LinkedIn Tumblr

ಉಳ್ಳಾಲ: ಉಳ್ಳಾಲ ಠಾಣಾ ವ್ಯಾಪ್ತಿಯ ಪಿಲಾರು ಪಂಜಮ್ದಾಯ ದೈವಸ್ಥಾನದ ಬಳಿ ಪತ್ನಿಯ ಮೇಲಿನ ಸಂಶಯದಿಂದ ಆಕೆಯನ್ನು ಕತ್ತು ಹಿಸುಕಿ ಕೊಂದು ಬಳಿಕ ತಾನೂ ಆತ್ಮಹತ್ಯೆಗೈದ ಘಟನೆ ನಡೆದಿದೆ.

ಪಿಲಾರು ನಿವಾಸಿಗಳಾದ ಶೋಭಾ ಪೂಜಾರಿ(45) ಕೊಲೆಯಾದ ಮಹಿಳೆ. ಆಕೆಯ ಪತಿ ಶಿವಾನಂದ ಪೂಜಾರಿ (55) ಕೊಲೆ ಮಾಡಿಬಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗುರುವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಶೋಭಾ ಅವರ ಹಿರಿಯ ಮಗ ಕಾರ್ತಿಕ್ ತಾಯಿಗೆ ಕರೆ ಮಾಡಿದ್ದು ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಪಕ್ಕದ ಮನೆಯವರಿಗೆ ವಿಚಾರಿಸಲು ತಿಳಿಸಿದ್ದಾನೆ. ಪಕ್ಕದ ಮನೆಯವರು ಶೋಭಾ ಅವರ ಮನೆಯೊಳಗೆ ಪ್ರವೇಶಿಸಿದಾಗ ಶೋಭಾ ಅವರು ಬೆಡ್ ರೂಮಿನ‌ ಮಂಚದಲ್ಲಿ ಬಿದ್ದಿದ್ದು ಗಾಬರಿಗೊಂಡ ಮಹಿಳೆ ಮನೆಮಂದಿಗೆ ತಿಳಿಸಿದಾಗ ಪಕ್ಕದ ತೋಟದಲ್ಲಿ ಮರಕ್ಕೆ ಗಂಡ ಶಿವಾನಂದ ಅವರು ನೇಣು ಬಿಗಿದುಕೊಂಡಿದ್ದು ತಿಳಿದುಬಂದಿದೆ.

ಇನ್ನು ಶಿವಾನಂದ ಪೂಜಾರಿ ಅವರು ಪೈಂಟರ್ ಕೆಲಸ ಮಾಡುತ್ತಿದ್ದು ಘಟನಾ ಸ್ಥಳಕ್ಕೆ ಫಾರೆನ್ಸಿಕ್‌ ತಂಡ ಭೇಟಿ ನೀಡಿ ಎರಡು ಮೃತದೇಹಗಳನ್ನು ಪರಿಶೀಲನೆ ನಡೆಸಿದೆ.

ಎಸಿಪಿ ದಿನಕರ್‌ ಶೆಟ್ಟಿ ನೇತೃತ್ವದಲ್ಲಿ ಉಳ್ಳಾಲ ಪೊಲೀಸ್‌ ಠಾಣೆಯ ತಂಡ ತನಿಖೆ ಕೈಗೆತ್ತಿಕೊಂಡಿದೆ.

Comments are closed.