ಕರ್ನಾಟಕ

ಬಿಜೆಪಿ ಬೀದಿ ರೌಡಿಗಳನ್ನು ಕಟ್ಟಿಕೊಂಡು ಚುನಾವಣೆ ಗೆಲ್ಲಲು ಹೊರಟಿದೆ: ಸಿದ್ದರಾಮಯ್ಯ

Pinterest LinkedIn Tumblr

ಬೆಂಗಳೂರು: ಸೋಲಿನ ಭೀತಿಯಲ್ಲಿರುವ ರಾಜ್ಯ ಬಿಜೆಪಿ ಬೀದಿ ರೌಡಿಗಳನ್ನು ಕಟ್ಟಿಕೊಂಡು ಚುನಾವಣೆ ಗೆಲ್ಲಲು ಹೊರಟಿರುವುದು, ಧರ್ಮ, ಸಂಸ್ಕೃತಿ ಬಗ್ಗೆ ಬೊಗಳೆ ಬಿಡುವ ಸಂಘ ಪರಿವಾರದ ನೈತಿಕ‌ ಅಧ:ಪತನವಲ್ಲದೆ ಮತ್ತೇನು? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಗಣಿಲೂಟಿಕೋರ ರೌಡಿಗಳನ್ನು ಕಟ್ಟಿಕೊಂಡು ಅಧಿಕಾರಕ್ಕೆ ಬಂದಿದ್ದ ಬಿಜೆಪಿಯ ಮುಖ್ಯಮಂತ್ರಿಗಳು ಕೊನೆಗೆ ಜೈಲು ಪಾಲಾಗಬೇಕಾಯಿತು. ಈಗ ಹೊಸ ರೌಡಿಪಡೆ ಕಟ್ಟುತ್ತಿರುವುದು ಯಾರನ್ನು ಜೈಲಿಗೆ ಕಳಿಸಲು?

ಬಾಯಿ ಬಿಟ್ಟರೆ ಸಂಸ್ಕೃತಿ, ಆಚಾರ, ವಿಚಾರದ‌ ಮಂತ್ರ‌ ಉದುರಿಸುವ ಆರ್.ಎಸ್.ಎಸ್ ನಾಯಕರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಕರೆಸಿ‌ಕೊಂಡದ್ದು ರೌಡಿಮೋರ್ಚಾ ಕಟ್ಟಲು ಸಲಹೆ ನೀಡಲಿಕ್ಕಾಗಿಯೇ? ಆರ್.ಎಸ್.ಎಸ್ ಮೌನ ಸಮ್ಮತಿ ಲಕ್ಷಣವೇ? #ರೌಡಿರಾಜಕಾರಣ ಎಂದು ಟ್ವೀಟ್ ಮಾಡಿದ್ದಾರೆ.

 

Comments are closed.