ಪ್ರಮುಖ ವರದಿಗಳು

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಭರ್ಜರಿ ಜಯಭೇರಿ

Pinterest LinkedIn Tumblr

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಭರ್ಜರಿ ಜಯಭೇರಿ ಗಳಿಸಿದೆ.

ಮುಸ್ಲಿಮ್ ಪ್ರಾಬಲ್ಯ ಹೊಂದಿರುವ 17 ಕ್ಷೇತ್ರಗಳ ಪೈಕಿ ಭಾರತೀಯ ಜನತಾ ಪಕ್ಷ 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಕೇವಲ ಐದು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಮುಖಭಂಗಕ್ಕೊಳಗಾಗಿದೆ.

ಈ ಎಲ್ಲಾ ಕ್ಷೇತ್ರಗಳಲ್ಲಿ ಹಲವು ದಶಕಗಳ ಕಾಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಿದ್ದರು. ಉದಾಹರಣೆಗೆ ಮುಸ್ಲಿಮ್ ಜನಸಂಖ್ಯೆ ಪ್ರಾಬಲ್ಯ ಹೊಂದಿರುವ ದರಿಯಾಪುರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಕಳೆದ ಹತ್ತು ವರ್ಷಗಳಿಂದ ತನ್ನ ಹಿಡಿತದಲ್ಲಿಟ್ಟುಕೊಂಡಿದ್ದು, ಈ ಬಾರಿ ಕಾಂಗ್ರೆಸ್ ಶಾಸಕ ಗಯಾಸುದ್ದೀನ್ ಶೇಖ್ ಬಿಜೆಪಿಯ ಕೌಶಿಕ್ ಜೈನ್ ವಿರುದ್ಧ ಪರಾಜಯಗೊಂಡಿದ್ದಾರೆ.

ಗುಜರಾತ್ ಸೂರತ್ ಅಭ್ಯರ್ಥಿ ಅಪಹರಣ, ಕುಟುಂಬ ಸದಸ್ಯರು ನಾಪತ್ತೆ: ಆಮ್ ಆದ್ಮಿ ಪಕ್ಷ ಆರೋಪ
ಕುತೂಹಲಕಾರಿ ವಿಷಯವೆನೆಂದರೆ ಮುಸ್ಲಿಂ ಪ್ರಾಬಲ್ಯ ಹೊಂದಿರುವ 17 ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ಒಂದೂ ಸ್ಥಾನದಲ್ಲಿಯೂ ಗೆಲುವು ಸಾಧಿಸುವಲ್ಲಿ ವಿಫಲವಾಗಿದೆ. ಏತನ್ಮಧ್ಯೆ ಆಪ್ ಹಾಗೂ ಅಸಾದುದ್ದೀನ್ ಒವೈಸಿಯ ಎಐಎಂಐಎಂ ಪಕ್ಷವು ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಗೆ ಚಲಾವಣೆಯಾಗುತ್ತಿದ್ದ ಮತಗಳನ್ನು ವಿಭಜಿಸುವಲ್ಲಿ ಮಹತ್ತರದ ಪಾತ್ರ ವಹಿಸಿರುವುದಾಗಿ ವರದಿ ವಿವರಿಸಿದೆ.

ಎಐಎಂಐಎಂ 13 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇಮ್ರಾನ್ ಖೇಡಾವಾಲಾ ಜಮಾಲ್ಪುರ್ ಖಾಡಿಯಾ ಕ್ಷೇತ್ರದಲ್ಲಿ ಸೋಲನ್ನನುಭವಿಸಿದ್ದಾರೆ. ವಡ್ಗಾಮ್ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಜಿಗ್ನೇಶ್ ಮೇವಾನಿ ಅಲ್ಪ ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ.

ಗುಜರಾತ್ ನಲ್ಲಿ ತಮ್ಮನ್ನು ಬೆಂಬಲಿಸುತ್ತಿರುವ ಮುಸ್ಲಿಮರ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ಬಿಲ್ಕಿಸ್ ಬಾನೊ ಪ್ರಕರಣದ 11 ಆರೋಪಿಗಳನ್ನು ಬಿಡುಗಡೆ ಮಾಡಿರುವುದಕ್ಕೆ ತೀವ್ರ ಪ್ರತಿಭಟನೆ ನಡೆಸಿತ್ತು.

Comments are closed.