ಕುಂದಾಪುರ: ರಾಜಕೀಯದಲ್ಲಿ ನಮಗೆ ನಾವೇ ಲೀಡರ್ ಆಗಬೇಕು. ಕಾರ್ಯಕರ್ತರನ್ನು, ಪದಾಧಿಕಾರಿಗಳನ್ನು ಒಗ್ಗೂಡಿಸಿಕೊಂಡು ಕೆಲಸ ನಿರ್ವಹಿಸಬೇಕು. ಚುನಾವಣೆ ಗೆಲ್ಲಲು ಅನ್ಯ ಪಕ್ಷದವರು ವಾಮಮಾರ್ಗದ ಸಂಚು ಹೂಡುವಾಗ ಆ ಸಂಚು ವಿಫಲಗೊಳಿಸಿ ಜನರಿಗೆ ನಿಜಾಂಶ ತಿಳಿಸಬೇಕಿದೆ. ನಾಯಕನಾಗುವ ವ್ಯಕ್ತಿಯ ಮುಂದೆ ಗುರಿ ಇರಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು.
ಮಂಗಳವಾರ ಮಧ್ಯಾಹ್ನ ಕುಂಭಾಶಿಯಲ್ಲಿ ನಡೆದ ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟ ಹಾಗೂ ಕುಂದಾಪುರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಬೂತ್ ಮಟ್ಟದಲ್ಲಿ ಮಾಹಿತಿ ನೀಡಲು ನೇಮಿಸಿರುವ ಸಂಯೋಜಕರ ಜೊತೆ ಸಂವಾದದಲ್ಲಿ ಅವರು ಮಾತನಾಡಿದರು.
ಇದೇ ಸಂದರ್ಭ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಮಂಜುನಾಥ ಭಂಡಾರಿಯವರನ್ನು ಸನ್ಮಾನಿಸಲಾಯಿತು.
ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಪ್ರಸನ್ನ ಕುಮಾರ್ ಶೆಟ್ಟಿ ಕೆರಾಡಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಶ್ಯಾಮಲಾ ಭಂಡಾರಿ, ವಿಕಾಸ್ ಹೆಗ್ಡೆ ಉಪಸ್ಥಿತರಿದ್ದರು. ರಾಕೇಶ್ ಶೆಟ್ಟಿ ವಕ್ವಾಡಿ ಕಾರ್ಯಕ್ರಮ ನಿರೂಪಿಸಿದರು.
Comments are closed.