ಕರಾವಳಿ

ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರನ್ನು ಭೇಟಿಯಾದ ಸಂಸದ ಬಿ.ವೈ ರಾಘವೇಂದ್ರ

Pinterest LinkedIn Tumblr

ಉಡುಪಿ: ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಡಿ.20 ರಂದು ಸಂಸತ್ ಭವನದಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾದರು.

ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 2,472 ಕೆಎಲ್ ಹಿಂದಿನ ಹಂಚಿಕೆಗೆ ಹೆಚ್ಚುವರಿಯಾಗಿ 3,000 ಕೆಎಲ್ ಸಬ್ಸಿಡಿ ರಹಿತ ಪಿಡಿಎಸ್ ಸೀಮೆಎಣ್ಣೆಯನ್ನು ಕರ್ನಾಟಕ ಸರ್ಕಾರಕ್ಕೆ ಮಂಜೂರು ಮಾಡಿದ್ದಕ್ಕಾಗಿ ಅವರು ಕೇಂದ್ರ ಸರಕಾರಕ್ಕೆ ಕೃತಜ್ಞತೆ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರಕ್ಕೆ 12,195 ಕೆಎಲ್ ನೈಜ ಹಂಚಿಕೆಯಲ್ಲಿ, ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 5,472 ಕೆಎಲ್ ಮಾತ್ರ ಮಂಜೂರಾಗಿದೆ. ಆದ್ದರಿಂದ, ಕರ್ನಾಟಕದ ಬಡ ಮೀನುಗಾರರಿಗೆ ಸಹಾಯ ಮಾಡಲು ಉಳಿದ 6,723 ಕೆಎಲ್‌ಗಳನ್ನು ಕರ್ನಾಟಕ ಸರ್ಕಾರಕ್ಕೆ ಮಂಜೂರು ಮಾಡಲು ಹಾಗೂ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನಗಳನ್ನು ನೀಡಬೇಕೆಂದು ಅವರು ವಿನಂತಿಸಿದ್ದು ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ, ಅತೀ ಶೀಘ್ರದಲ್ಲಿ ಕರ್ನಾಟಕದ ಉಳಿದ ಕೋಟಾದ ಸೀಮೆಎಣ್ಣೆ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.